ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದು ಮತ್ತು ನಾಳೆ 2 ದಿನ ಮದ್ಯ ಸಿಗಲ್ಲ.ಹೌದು, ದತ್ತ ಜಯಂತಿ ಹಿನ್ನೆಲೆ ಚಿಕ್ಕಮಗಳೂರು, ಮೂಡಿಗೆರೆ, ಕೊಪ್ಪ, ಶೃಂಗೇರಿ, ನರಸಿಂಹರಾಜಪುರ, ತರೀಕೆರೆ, ಕಡೂರು ತಾಲೂಕು ವ್ಯಾಪ್ತಿಯಲ್ಲಿ ದಿನಾಂಕ 13:12: 2024 ಬೆಳಗ್ಗೆ 6 ರಿಂದ 14:12:2024 ರ ರಾತ್ರಿ 11 ಗಂಟೆವರೆಗೆ ಮದ್ಯ ಮಾರಾಟ ಹಾಗೂ ಸರಬರಾಜು ನಿಷೇಧಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.
ಅನುಸೂಯ ಜಯಂತಿ, ಶೋಭಾ ಯಾತ್ರೆ, ದತ್ತ ಜಯಂತಿ ಹಿನ್ನೆಲೆ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ದತ್ತ ಜಯಂತಿ ಹಿನ್ನೆಲೆ ಚಿಕ್ಕಮಗಳೂರು, ಮೂಡಿಗೆರೆ, ಕೊಪ್ಪ, ಶೃಂಗೇರಿ, ನರಸಿಂಹರಾಜಪುರ, ತರೀಕೆರೆ, ಕಡೂರು ತಾಲೂಕು ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.
