ಬೆಂಗಳೂರು: ಫೆಂಗಲ್ ಚಂಡಮಾರುತದ ಅಬ್ಬರದ ಬಳಿಕ ಇದೀಗ ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭರ ಕುಸಿತಗೊಂಡು, ಮತ್ತೊಂದು ಚಂಡಮಾರುತಸೃಷ್ಟಿಯಾಗಿದ್ದು, ಹಲವು ರಾಯಗಳಲ್ಲಿ ವರುಣಾರ್ಭಟ ಜೋರಾಗಿದೆ. ತಮಿಳುನಾಡು, ಕೇರಳ ರಾಜ್ಯಗಳಲ್ಲಿ ಮಳೆ ಅನಾಹುತಗಳಿಂದ ಜನ ಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಕರ್ನಾಟಕದಲ್ಲಿಯೂ ಎರಡು ದಿನಗಳಿಂದ ಕೆಲ ಜಿಲ್ಲೆಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆಯಿಂದ ಒಂದೇ ಸಮನೆ ತುಂತುರು ಮಳೆ ಸುರಿಯುತ್ತಿದೆ. ಇಂದು ಮುಂಜಾನೆಯಿಂದಲೇ ಜಿಟಿಜಿಟಿ ಮಳೆ ಶುರುವಾಗಿದ್ದು, ಶೀತಗಾಳಿಗೆ ಜನರು ತತ್ತರಿಸಿ ಹೋಗಿದ್ದಾರೆ. ಇದರೊಂದಿಗೆ ಬೆಂಗಳೂರಿಗರಿಗೆ ಆರೋಗ್ಯ ಸಮಸ್ಯೆಗಳು ಹೆಚ್ಚುವ ಸಾಧ್ಯತೆ ಇದೆ.
ಇನ್ನು ರಾಜ್ಯದಲ್ಲಿ ಐದು ದಿನಗಳಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ತುಮಕೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಾಮರಾಜನಗರ, ಹಾಸನ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ.
ರಾಯಚೂರು, ವಿಜಯನಗರ, ಯಾದಗಿರಿ ಕಲಬುರಗಿ, ಕೊಪ್ಪಳ, ಗದಗ, ಬೆಳಗವೈ, ಬಾಗಲಕೋಟೆ ಸೇರಿದಂತೆ ಉತ್ತರ ಒಳನಾಡಿನಲ್ಲಿ ಬಹುಏಕ ಒಣಹವೆ ಮುಂದುವರೆಯಲಿದೆ.