ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್(RBI) ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ.
ಗುರುವಾರ ಮಧ್ಯಾಹ್ನ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕೃತ ವೆಬ್ಸೈಟ್ಗೆ ಬೆದರಿಕೆ ಇಮೇಲ್ ಕಳುಹಿಸಲಾಗಿದೆ.ಈ ಬೆದರಿಕೆ ಇಮೇಲ್ ಅನ್ನು ರಷ್ಯಾದ ಭಾಷೆಯಲ್ಲಿ ಕಳುಹಿಸಲಾಗಿದೆ ಮತ್ತು ಅದು ರಿಸರ್ವ್ ಬ್ಯಾಂಕ್ ಅನ್ನು ಸ್ಫೋಟಿಸುವ ಬೆದರಿಕೆಯೊಡ್ಡಲಾಗಿದೆ.ಈ ಸಂಬಂಧ ಅಪರಿಚಿತ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.