ಬೆಂಗಳೂರು : ಕಲ್ಯಾಣ ಕರ್ನಾಟಕ ಭಾಗದ 97 ಪಿಡಿಒ ಹುದ್ದೆಗಳ ಪರೀಕ್ಷೆಯನ್ನು ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ್ದು, ಈ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಲೀಕ್ ಆಗಿಲ್ಲ ಮತ್ತು ಪ್ರಶ್ನೆಪತ್ರಿಕೆ ವಿತರಿಸಲು ವಿಳಂಬವಾಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಈ ಪ್ರಕರಣದ ಸತ್ಯಾಸತ್ಯತೆ ತಿಳಿಯಲು ಈಗಾಗಲೇ ಆಯೋಗದಲ್ಲಿ ಉಪ ಸಮಿತಿಯನ್ನು ರಚಿಸಲಾಗಿದ್ದು, ವರದಿ ಸ್ವೀಕೃತವಾದ ನಂತರ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗದ 97 ಪಿಡಿಒ ಹುದ್ದೆಗಳ ಪರೀಕ್ಷೆಯನ್ನು ರಾಯಚೂರಿನ ಸಿಂಧನೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ್ದು, ಈ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿಲ್ಲ ಮತ್ತು ಪ್ರಶ್ನೆಪತ್ರಿಕೆ ವಿತರಿಸಲು ವಿಳಂಬವಾಗಿಲ್ಲ. ಈ ಪ್ರಕರಣದ ಸತ್ಯಾಸತ್ಯತೆ ತಿಳಿಯಲು ಕರ್ನಾಟಕ ಲೋಕಸೇವಾ ಆಯೋಗವು 3 ಸದಸ್ಯರ ಉಪ ಸಮಿತಿಯನ್ನು ರಚಿಸಿದ್ದು, ಸಮಿತಿ ಸಲ್ಲಿಸುವ ಅಂತಿಮ ವರದಿಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಶಶಿಲ್ ನಮೋಶಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗದ 97 ಪಿಡಿಒ ಹುದ್ದೆಗಳ ಪರೀಕ್ಷೆಯನ್ನು ರಾಯಚೂರಿನ ಸಿಂಧನೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ್ದು, ಈ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿಲ್ಲ ಮತ್ತು ಪ್ರಶ್ನೆಪತ್ರಿಕೆ ವಿತರಿಸಲು ವಿಳಂಬವಾಗಿಲ್ಲ. ಈ ಪ್ರಕರಣದ ಸತ್ಯಾಸತ್ಯತೆ ತಿಳಿಯಲು ಕರ್ನಾಟಕ ಲೋಕಸೇವಾ ಆಯೋಗವು 3… pic.twitter.com/7bWGa8Q99p
— Siddaramaiah (@siddaramaiah) December 12, 2024