ಬೆಂಗಳೂರು : ಬಾಣಂತಿಯರ ಸರಣಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಫಾರ್ಮಾ ಕಂಪನಿ ಮೇಲೆ ಆರೋಗ್ಯ ಇಲಾಖೆ ಪ್ರಕರಣ ದಾಖಲಿಸಿದೆ.
ಬಳ್ಳಾರಿಯ ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದ ಬಾಣಂತಿಯರ ಸಾವು ಪ್ರಕರಣವನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಫಾರ್ಮಾ ಕಂಪನಿ ಮೇಲೆ ಆರೋಗ್ಯ ಇಲಾಖೆ ಪ್ರಕರಣ ದಾಖಲಿಸಿದೆ.
ಐವಿ ರಿಂಗರ್ ಲ್ಯಾಕ್ಟೇಟ್ ದ್ರಾವಣ ಬಳಕೆಗೆ ಯೋಗ್ಯವಲ್ಲ ಎಂದು ಕsರ್ನಾಟಕ ರಾಜ್ಯ ಡ್ರಗ್ಸ್ ಲಾಜಿಸ್ಟಿಕ್ಸ್ ವರದಿ ನೀಡಿದ್ದರೆ, ಸೆಂಟ್ರಲ್ ಡ್ರಗ್ಸ್ ಲ್ಯಾಬ್ (CDL) ಪಾಸಿಟಿವ್ ವರದಿ ನೀಡಿದೆ. ಇದನ್ನು ಉಲ್ಲೇಖಿಸಿ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ)ಗೆ ಪತ್ರ ಬರೆದು ಪ್ರಶ್ನೆ ಮಾಡಿದ್ದೇವೆ. ಪಶ್ಚಿಮ್ ಬಂಗಾ ಫಾರ್ಮಾಸ್ಯುಟಿಕಲ್ಸ್ ವಿರುದ್ಧ ಪ್ರಾಸಿಕ್ಯೂಷನ್ಗೆ ಆದೇಶಿಸಲಾಗುವುದು ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಇತ್ತೀಚೆಗೆ ತಿಳಿಸಿದ್ದರು.