ಹೈದರಾಬಾದ್ : ಥಿಯೇಟರ್ ನಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆಗೆ ಕರೆದೊಯ್ದಿದ್ದಾರೆ.
ಹೈದರಾಬಾದ್: ‘ಪುಷ್ಪ 2’ ಚಿತ್ರದ ಪ್ರೀಮಿಯರ್ನಲ್ಲಿ ನಡೆದ ಕಾಲ್ತುಳಿತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ನಟ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಮೃತರ ಕುಟುಂಬ ಸದಸ್ಯರ ದೂರಿನ ಆಧಾರದ ಮೇಲೆ ಚಿಕ್ಕಡ್ಪಲ್ಲಿ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ ಸೆಕ್ಷನ್ 105 (ಕೊಲೆಗೆ ಕಾರಣವಲ್ಲದ ನರಹತ್ಯೆಗೆ ಶಿಕ್ಷೆ) ಮತ್ತು 118 (1) ಆರ್ / ಡಬ್ಲ್ಯೂ 3 (5) (ಸ್ವಯಂಪ್ರೇರಿತವಾಗಿ ಗಾಯ ಅಥವಾ ತೀವ್ರ ಗಾಯಗೊಳಿಸುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹೈದರಾಬಾದ್ ಪೊಲೀಸ್ನ ಕೇಂದ್ರ ವಲಯದ ಉಪ ಪೊಲೀಸ್ ಆಯುಕ್ತ (ಡಿಸಿಪಿ) ಅಕ್ಷಾಂಶ್ ಯಾದವ್ ತಿಳಿಸಿದ್ದಾರೆ.
ಪುಷ್ಪ-2 ಪ್ರೀಮಿಯರ್ ಶೋ ವೇಳೆ ಕಾಲ್ತುಳಿತದಲ್ಲಿ ಮಹಿಳೆ ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧ ನಟ ಅಲ್ಲು ಅರ್ಜುನ್ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು.ತಮ್ಮ ಮೇಲಿನ ಪ್ರಕರಣ ರದ್ದುಗೊಳಿಸುವಂತೆ ಕೋರಿ ನಟ ಅಲ್ಲು ಅರ್ಜುನ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.ಹೈದರಾಬಾದ್’ನ ಸಂಧ್ಯಾ ಚಿತ್ರಮಂದಿರದಲ್ಲಿ ಡಿಸೆಂಬರ್ 4 ರಂದು ನಡೆದ ಪುಷ್ಪಾ 2: ದಿ ರೂಲ್ ಚಿತ್ರದ ಪ್ರೀಮಿಯರ್ ಸಮಯದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ರೇವತಿ (39) ಎಂಬ ಮಹಿಳೆ ಸಾವನ್ನಪ್ಪಿದ್ದರೆ, ಅವರ ಒಂಬತ್ತು ವರ್ಷದ ಮಗ ಗಾಯಗೊಂಡಿದ್ದರು.
ಸಾಂದರ್ಭಿಕ ಚಿತ್ರ
#WATCH | Telangana: Actor Allu Arjun has been brought to Chikkadpally police station in Hyderabad for questioning in connection with the case of death of a woman at Sandhya theatre on December 4.
(Outside visuals from the police station) pic.twitter.com/aFfbKeMbCI
— ANI (@ANI) December 13, 2024