ಕೋಲ್ಕತ್ತಾ: ಕೊಲ್ಕತ್ತಾದ ಟೋಲಿಗಂಜ್ ಪ್ರದೇಶದಲ್ಲಿ ಇಂದು ಕಸದ ರಾಶಿಯಿಂದ 35 ಮತ್ತು 40 ರ ನಡುವಿನ ಮಹಿಳೆಯ ಕತ್ತರಿಸಿದ ತಲೆ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಲ್ಫ್ ಗ್ರೀನ್ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಹಾಂ ರಸ್ತೆಯ ವ್ಯಾಟ್ನಲ್ಲಿ ಇಂದು ಮುಂಜಾನೆ ಸ್ಥಳೀಯರು ದೇಹದ ಭಾಗವನ್ನು ಹೊಂದಿರುವ ಪ್ಲಾಸ್ಟಿಕ್ ಚೀಲವನ್ನು ಗಮನಿಸಿ ಪೊಲೀಸರಿಗೆ ತಿಳಿಸಿದ್ದಾರೆ.
ದಕ್ಷಿಣ ಉಪನಗರ ವಿಭಾಗದ ಹಿರಿಯ ಪೊಲೀಸ್ ಅಧಿಕಾರಿಗಳು, ಸ್ಥಳೀಯ ಪೊಲೀಸ್ ಠಾಣೆಗಳ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದರು. ತುಂಡರಿಸಿದ ತಲೆಯನ್ನು ಹೆಚ್ಚಿನ ಪರೀಕ್ಷೆಗಾಗಿ ಎಂಆರ್ ಬಂಗೂರ್ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಸ ರಾಶಿಯಿಂದ ತಲೆ ಭಾಗ ಪತ್ತೆಯಾಗಿದೆ. ಸದ್ಯ ಪ್ರಾಥಮಿಕ ಹಂತದಲ್ಲಿ ತನಿಖೆ ಆರಂಭಿಸಲಾಗಿದೆ. ದೇಹದ ಉಳಿದ ಭಾಗಗಳನ್ನು ಪತ್ತೆ ಹಚ್ಚುವ ಪ್ರಯತ್ನ ನಡೆಯುತ್ತಿದೆ ಎಂದು ಉಪ ಪೊಲೀಸ್ ಆಯುಕ್ತ (ದಕ್ಷಿಣ ಉಪನಗರ ವಿಭಾಗ) ಬಿದಿಶಾ ಕಲಿತಾ ಹೇಳಿದ್ದಾರೆ.