ಬೆಳಗಾವಿ: 2024-26ರ ಅವಧಿಗೆ 10,000 ಕೋಟಿ ರೂ. ಬಂಡವಾಳ ಹೂಡಿಕೆ ಹಾಗೂ ಎರಡು ಲಕ್ಷ ಉದ್ಯೋಗ ಸೃಷ್ಟಿಯ ಗುರಿಯೊಂದಿಗೆ ಹೊಸ ಜವಳಿ ನೀತಿ ಜಾರಿಗೊಳಿಸಲು ನಿರ್ಧರಿಸಲಾಗಿದೆ ಎಂದು ಜವಳಿ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ.
ಬೆಳಗಾವಿ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ಮಾತನಾಡಿದ ಅವರು, ಈ ನೂತನ ಜವಳಿ ನೀತಿ ಸಿದ್ಧಪಡಿಸಲು ಖಾಸಗಿ ಕಂಪನಿಯನ್ನು ನೇಮಕ ಮಾಡಲಾಗಿದ್ದು, ಜವಳಿ ನೀತಿಯ ಕರಡು ಸಿದ್ದಪಡಿಸಲು ಪೂರ್ವಭಾವಿ ಕ್ರಮ ಕೈಗೊಳ್ಳಲಾಗಿದೆ. ನೇಕಾರರು ಆರ್ಥಿಕ ಹೊರೆ ಮತ್ತು ಇತರೆ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಇಲಾಖೆಯಿಂದ ಹಲವು ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು ಹೇಳಿದ್ದಾರೆ.