ಬೆಳಗಾವಿ: ಎಲೆ ಚುಕ್ಕೆ ರೋಗದಿಂದ ರಾಜ್ಯದಲ್ಲಿ ಸುಮಾರು 53,977 ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿರುವ ಅಡಿಕೆ ಬೆಳೆಗೆ ಹಾನಿಯಾಗಿದೆ ಎಂದು ತೋಟಗಾರಿಕೆ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರು ತಿಳಿಸಿದ್ದಾರೆ.
ಬೆಳಗಾವಿ ಅಧಿವೇಶನದಲ್ಲಿ ಮಾಹಿತಿ ನೀಡಿದ ಸಚಿವರು, ರೋಗ ಹರಡದಂತೆ ನಿಯಂತ್ರಿಸಲು ಶಿವಮೊಗ್ಗ ತೋಟಗಾರಿಕೆ ವಿಶ್ವವಿದ್ಯಾಲಯದ ತಜ್ಞರ ನೇತೃತ್ವದ ತಂಡ ರಚನೆಯಾಗಿದ್ದು, ಸಂಶೋಧನೆಗೆ 50 ಲಕ್ಷ ರೂ. ಅನುದಾನ ಒದಗಿಸಿದೆ ಎಂದು ತಿಳಿಸಿದ್ದಾರೆ.
ರೋಗದ ನಿಯಂತ್ರಣ ಕುರಿತು ಕೃಷಿ ಮತ್ತು ತೋಟಗಾರಿಕೆ ವಿಜ್ಞಾನ ವಿಶ್ವ ವಿದ್ಯಾಲಯದ ತಜ್ಞರ ಸಹಯೋಗದಲ್ಲಿ ರೈತರಿಗೆ ತರಬೇತಿ, ಪ್ರಾತ್ಯಕ್ಷಿಕೆಗಳನ್ನು ನೀಡಿ, ಮಾಹಿತಿ ಹಾಗೂ ಪ್ರಚಾರ ಕಾರ್ಯ ಮಾಡಲಾಗುವುದು ಎಂದು ಹೇಳಿದ್ದಾರೆ.