HomeKarnatakaBIG NEWS : ಡಿ. 23 ರಿಂದ ಬೆಂಗಳೂರಿನಲ್ಲಿ 'ಅಂತಾರಾಷ್ಟ್ರೀಯ ಸಾವಯವ ಮತ್ತು ಸಿರಿಧಾನ್ಯ ವಾಣಿಜ್ಯ...

BIG NEWS : ಡಿ. 23 ರಿಂದ ಬೆಂಗಳೂರಿನಲ್ಲಿ ‘ಅಂತಾರಾಷ್ಟ್ರೀಯ ಸಾವಯವ ಮತ್ತು ಸಿರಿಧಾನ್ಯ ವಾಣಿಜ್ಯ ಮೇಳ’.!

ಬೆಂಗಳೂರು : ಡಿಸೆಂಬರ್ 23, 24, 25 ರಂದು ಬೆಂಗಳೂರಿನ ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಅಂತಾರಾಷ್ಟ್ರೀಯ ಸಾವಯವ ಮತ್ತು ಸಿರಿಧಾನ್ಯ ವಾಣಿಜ್ಯ ಮೇಳ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಅಂತಾರಾಷ್ಟ್ರೀಯ ಸಾವಯವ ಮತ್ತು ಸಿರಿಧಾನ್ಯ ವಾಣಿಜ್ಯ ಮೇಳದ ಪೂರ್ವಭಾವಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಸಿಎಂ ಮಾತನಾಡಿದರು.

ಇಡೀ ದೇಶದಲ್ಲಿ ಕರ್ನಾಟಕವು ಸಿರಿಧಾನ್ಯ ಉತ್ಪಾದನೆಯಲ್ಲಿ ಮೂರನೇ ಸ್ಥಾನದಲ್ಲಿದೆ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಸಿರಿಧಾನ್ಯ ಕೃಷಿಯಲ್ಲಿ ತೊಡಗಿಕೊಳ್ಳಬೇಕು. ಇದೇ ಡಿಸೆಂಬರ್ 23, 24, 25 ರಂದು ಬೆಂಗಳೂರಿನ ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಅಂತಾರಾಷ್ಟ್ರೀಯ ಸಾವಯವ ಮತ್ತು ಸಿರಿಧಾನ್ಯ ವಾಣಿಜ್ಯ ಮೇಳ ನಡೆಯಲಿದೆ. ದೇಶ ವಿದೇಶಗಳಲ್ಲಿ ಸಿರಿಧಾನ್ಯಗಳ ಬೇಡಿಕೆ ಹೆಚ್ಚಾಗುತ್ತಿದೆ. ವಿಶ್ವದಲ್ಲಿ 903.61 ಲಕ್ಷ ಟನ್ ಗಳಷ್ಟು ಸಿರಿಧಾನ್ಯವನ್ನು ಬೆಳೆಯಲಾಗುತ್ತಿದೆ. ಭಾರತದಲ್ಲಿ 31.50 ರಷ್ಟು ಬೆಳೆಯುತ್ತಿದ್ದು, ವಿಶ್ವದಲ್ಲಿ ಅತ್ಯಂತ ಹೆಚ್ಚು ಸಿರಿಧಾನ್ಯ ಬೆಳೆಯುವ ದೇಶವಾಗಿದೆ. ಸುಮಾರು 18.38 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 22.16 ಲಕ್ಷ ಟನ್ ಗಳಷ್ಟು ಸಿರಿಧಾನ್ಯವನ್ನು ರಾಜ್ಯದಲ್ಲಿ ಬೆಳೆಯಲಾಗುತ್ತಿದೆ. ಇದರಲ್ಲಿ ಪ್ರೊಟೀನ್ ಹಾಗೂ ನಾರಿನ ಅಂಶ ಹೆಚ್ಚಾಗಿದೆ. ಜನರಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಹಾಗೂ ಸಕ್ಕರೆ ಕಾಯಿಲೆಯನ್ನು ನಿಯಂತ್ರಿಸಲು ಸಿರಿಧಾನ್ಯದ ಬಳಕೆ ಸಹಕಾರಿಯಾಗಿದೆ ಎಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular