ಬೆಂಗಳೂರು: ಮಂಡ್ಯದಲ್ಲಿ ಡಿ 20 ರಿಂದ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ದೃಷ್ಟಿಚೇತನರ ವಿಶೇಷ ಕವಿಗೋಷ್ಠಿ ಆಯೋಜಿಸಲಾಗಿದೆ.
ಸಾಹಿತ್ಯ ಸಮ್ಮೇಳನದ ಇತಿಹಾಸದಲ್ಲೇ ಮೊದಲ ಬಾರಿಗೆ ಅಂಧರಿಗಾಗಿ ಕವಿಗೋಷ್ಠಿ ಆಯೋಜಿಸುತ್ತಿರುವುದು ಈ ಬಾರಿಯ ವಿಶೇಷವಾಗಿದೆ. ಡಿಸೆಂಬರ್ 20 ರಿಂದ 22 ರವರೆಗೆ ಮಂಡ್ಯದಲ್ಲಿ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಮೊದಲನೇ ದಿನ ಶುಕ್ರವಾರ ಮಧ್ಯಾಹ್ನ ಪ್ರಧಾನ ವೇದಿಕೆಯಲ್ಲಿ ದೃಷ್ಟಿ ಚೇತನರ ವಿಶೇಷ ಕವಿಗೋಷ್ಠಿ ಆಯೋಜಿಸಲಾಗಿದೆ.
ಕವಿಗೋಷ್ಠಿಯ ಅಧ್ಯಕ್ಷತೆ, ಆಶಯ ನುಡಿಗಳನ್ನಾಡುವವರು ಕೂಡ ಅಂಧರಾಗಿರುವುದು ಗಮನಾರ್ಹವಾಗಿದೆ. ಡಾ. ಶಿವರಾಜ ಶಾಸ್ತ್ರಿ ಹೇರೂರ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಲಿದ್ದು, ಸಾಹಿತಿ ಮುದಿಗೆರೆ ರಮೇಶ್ ಕುಮಾರ್ ಆಶಯ ನುಡಿಗಳನ್ನಾಡಲಿದ್ದಾರೆ.
ಸಾಹಿತ್ಯ ಸಮ್ಮೇಳನದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಅಂಧರ ಕವಿಗೋಷ್ಠಿ ಆಯೋಜಿಸಿರುವುದು ಸಾಹಿತ್ಸಾಸಕ್ತರ ಮೆಚ್ಚುಗೆಗೆ ಪಾತ್ರವಾಗಿದೆ.