ಮಂಡ್ಯ : ನೇಣು ಬಿಗಿದುಕೊಂಡು ಎಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕುರುಬರದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಜ್ಞಾನೇಷ್ (30) ಎಂಬುವವರು ನೀರಿನ ಟ್ಯಾಂಕ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಶಿಂಷಾ ಏತ ನೀರಾವರಿ ಯೋಜನೆಯಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಜ್ಞಾನೇಷ್ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ನಿವಾಸಿ ಎಂಬುದು ತಿಳಿದು ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಕೆಸ್ತೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.