ನವದೆಹಲಿ: ಆರ್.ಕೆ.ಪುರಂನ ದೆಹಲಿ ಪಬ್ಲಿಕ್ ಶಾಲೆ ಮತ್ತು ವಸಂತ್ ಕುಂಜ್ನ ರಯಾನ್ ಇಂಟರ್ನ್ಯಾಷನಲ್ ಶಾಲೆ ಸೇರಿದಂತೆ ದೆಹಲಿಯ ಹಲವಾರು ಶಾಲೆಗಳಿಗೆ ಶನಿವಾರ ಮತ್ತೊಮ್ಮೆ ಇಮೇಲ್ ಮೂಲಕ ಬಾಂಬ್ ಬೆದರಿಕೆಗಳು ಬಂದಿವೆ.
ಬೆಳಿಗ್ಗೆ 6:09 ಕ್ಕೆ ಡಿಪಿಎಸ್ ಆರ್ ಕೆ ಪುರಂನಲ್ಲಿ ಬಾಂಬ್ ಬೆದರಿಕೆಯ ಬಗ್ಗೆ ಕರೆ ಬಂದಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆಗಳ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ದೆಹಲಿ ಪೊಲೀಸರು, ಅಗ್ನಿಶಾಮಕ ಇಲಾಖೆ, ಶ್ವಾನದಳ ಮತ್ತು ಬಾಂಬ್ ಪತ್ತೆ ತಂಡಗಳು ಶಾಲೆಗೆ ತಲುಪಿದ್ದು, ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ.
ಇಲ್ಲಿಯವರೆಗೆ ಅನುಮಾನಾಸ್ಪದವಾಗಿ ಏನೂ ಕಂಡುಬಂದಿಲ್ಲ ಆದರೆ, ಶೋಧ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.childrenofallah@outlook.com ರಿಂದ ಬ್ಯಾರಿ ಅಲ್ಲಾ ಎಂಬಾತನ ಹೆಸರಿನಲ್ಲಿ ಗ್ರೂಪ್ ಇಮೇಲ್ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.