ಬೆಂಗಳೂರು : ಪತ್ನಿ ಕಾಟಕ್ಕೆ ಬೇಸತ್ತು ಕಾನ್ಸ್ ಟೇಬಲ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಬೈಯಪ್ಪನಹಳ್ಳಿಯಲ್ಲಿ ನಡೆದಿದೆ.
ರೈಲಿಗೆ ತಲೆ ಕೊಟ್ಟು ತಿಪ್ಪಣ್ಣ ಎಂಬ ಕಾನ್ಸ್ ಟೇಬಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಹುಳಿಮಾವು ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿ ಕೆಲಸ ನಿರ್ವಹಿಸುತ್ತಿದ್ದ ತಿಪ್ಪಣ್ಣ ಮಾವ ಹಾಗೂ ಪತ್ನಿ ವಿರುದ್ಧ ಆರೋಪ ಮಾಡಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.