ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ವತಿಯಿಂದ 2024-25 ನೇ ಸಾಲಿನಲ್ಲಿ ಬಿ.ಎಡ್ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್, ಬೌದ್ಧ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ನೀಡಲು ಸೇವಾಸಿಂಧು ಪೋರ್ಟಲ್ನ ಆನ್ಲೈನ್ನಲ್ಲಿ https://sevasindhu.karnataka.gov.in ಅರ್ಜಿ ಆಹ್ವಾನಿಸಲಾಗಿದೆ.
ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಆಜಾದ್ ಭವನ, ಎಫ್.ಎಂ.ಸಿ. ಕಾಲೇಜು ಹತ್ತಿರ, ಮಡಿಕೇರಿ, ಇವರನ್ನು ಹಾಗೂ ಕಚೇರಿ ದೂ.ಸಂ.08272 –225528, ಮಾಹಿತಿ ಕೇಂದ್ರ, ಮಡಿಕೇರಿ 08272 -220214 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಆರ್.ಕೃಷ್ಣಮೂರ್ತಿ ಅವರು ತಿಳಿಸಿದ್ದಾರೆ.