ಬೆಳಗಾವಿ: ರಾಜ್ಯದಲ್ಲಿ ಭೂಕುಸಿತ ತಡೆಗೆ ಶಾಶ್ವತ ಪರಿಹಾರ ಕಲ್ಪಿಸಲು 425 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಅದರ ಭಾಗವಾಗಿ ಈಗಾಗಲೇ 152 ಕೋಟಿ ರೂ. ಹಣವನ್ನು ವಿವಿಧ ಕಾಮಗಾರಿಗಳಿಗೆ ಮಂಜೂರು ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಅವರು ಬೆಳಗಾವಿ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ಮಾಹಿತಿ ನೀಡಿದ ಅವರು, ರಾಜ್ಯದಲ್ಲಿ ಈ ವರ್ಷ ಅತಿವೃಷ್ಟಿಯಿಂದ ಕೃಷಿ ಮತ್ತು ತೋಟಗಾರಿಕೆ ಬೆಳೆ, ಮನುಷ್ಯ ಹಾಗೂ ಜಾನುವಾರುಗಳ ಜೀವ ಹಾನಿ, ರಸ್ತೆ-ಸೇತುವೆ, ಇತರೆ ಮೂಲಭೂತ ಸೌಕರ್ಯಗಳಿಗೆ ಹಾನಿ ಉಂಟಾಗಿದ್ದು, 297 ಕೋಟಿ ಪರಿಹಾರ ವಿತರಿಸಲಾಗಿದೆ ಎಂದು ತಿಳಿಸಿದ್ದಾರೆ.