HomeKarnatakaರೈಲಿಗೆ ಸಿಲುಕಿ ಹೆಡ್ ಕಾನ್ಸ್ ಟೇಬಲ್ ತಿಪ್ಪಣ್ಣ ಆತ್ಮಹತ್ಯೆ ಪ್ರಕರಣ: ಕಿರುಕುಳ ಆರೋಪದಡಿ ಪತ್ನಿ ಸೇರಿ...

ರೈಲಿಗೆ ಸಿಲುಕಿ ಹೆಡ್ ಕಾನ್ಸ್ ಟೇಬಲ್ ತಿಪ್ಪಣ್ಣ ಆತ್ಮಹತ್ಯೆ ಪ್ರಕರಣ: ಕಿರುಕುಳ ಆರೋಪದಡಿ ಪತ್ನಿ ಸೇರಿ ಮೂವರ ವಿರುದ್ಧ ಕೇಸ್ ದಾಖಲು

ಬೆಂಗಳೂರು: ರೈಲಿಗೆ ಸಿಲುಕಿ ಹೆಡ್ ಕಾನ್ಸ್ ಟೇಬಲ್ ತಿಪ್ಪಣ್ಣ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಪ್ಪಣ್ಣ ಅವರ ತಾಯಿ ಬಸಮ್ಮ ನೀಡಿದ ದೂರಿನ ಮೇರೆಗೆ ಬೆಂಗಳೂರಿನ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪತ್ನಿ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.

ಆತ್ಮಹತ್ಯೆಗೆ ಶರಣಾದ ಹೆಡ್ ಕಾನ್ಸ್ ಟೇಬಲ್ ತಿಪ್ಪಣ್ಣ ಅವರ ಪತ್ನಿ ಪಾರ್ವತಿ, ಮಾವ ಯಮುನಪ್ಪ, ಬಾಮೈದ ಮಲ್ಲಪ್ಪ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಪತ್ನಿ, ಮಾವ, ಬಾಮೈದ ಅವರು ಯಾದಗಿರಿ ಜಿಲ್ಲೆಯ ಸುರಪುರ ಮೂಲದವರಾಗಿದ್ದಾರೆ. ಇವರು ತಿಪ್ಪಣ್ಣನಿಗೆ ಕಿರುಕುಳ ನೀಡಿ ಜೀವ ಬೆದರಿಕೆ ಹಾಕಿದ ಆರೋಪದಡಿ ಕೇಸು ದಾಖಲಿಸಿಕೊಂಡ ಬೆಂಗಳೂರು ರೈಲ್ವೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಪತ್ನಿ ಪಾರ್ವತಿ, ಮಾವ ಯಮುನಪ್ಪ ವಿರುದ್ಧ ಕಿರುಕುಳ, ಜೀವ ಬೆದರಿಕೆ ಆರೋಪ ಮಾಡಿದ ತಿಪ್ಪಣ್ಣ ಡೆತ್ ನೋಟ್ ಬರೆದಿಟ್ಟು, ರೈಲಿಗೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿದ್ದರು. ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular