ರಾಮನಗರ: ಬೆಸ್ಕಾಂ ನಿರ್ಲಕ್ಷ್ಯಕ್ಕೆ ಗುತ್ತಿಗೆ ಕಾರ್ಮಿಕ ಬಲಿಯಾದ ಘಟನೆ ರಾಮನಗರ ತಾಲೂಕಿನ ಚನ್ನಮಾನಹಳ್ಳಿಯ ಸಮೀಪ ನಡೆದಿದೆ.
ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ಕೆಂಪಾಪುರ ಗ್ರಾಮದ ನಿವಾಸಿ ಮುದ್ದಣ್ಣ(43) ಮೃತಪಟ್ಟವರು ಎಂದು ಹೇಳಲಾಗಿದೆ. ವಿದ್ಯುತ್ ಪರಿವರ್ತಕ ಅಳವಡಿಕೆ ವೇಳೆಯಲ್ಲಿ ವಿದ್ಯುತ್ ಸ್ಪರ್ಶವಾಗಿ ಸಾವನ್ನಪ್ಪಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಘಟನೆ ಸಂಭವಿಸಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.