ಗುವಾಹಟಿ: ಮಣಿಪುರದಲ್ಲಿ ಅಪರಿಚಿತ ಬಂದೂಕುಧಾರಿಗಳು ಬಿಹಾರದ ಇಬ್ಬರು ವಲಸೆ ಕಾರ್ಮಿಕರನ್ನು ಕೊಂದಿದ್ದಾರೆ,
ಸುನಾಲಾಲ್ ಕುಮಾರ್(18) ಮತ್ತು ದಶರತ್ ಕುಮಾರ್(17) ಮೃತ ಕಾರ್ಮಿಕರು ಎಂದು ಗುರುತಿಸಲಾಗಿದೆ. ಅವರು ಕಾಕ್ಚಿಂಗ್ ಜಿಲ್ಲೆಯ ಕೈರಾಕ್‌ನಲ್ಲಿ ಸಂಜೆ ಸೈಕಲ್‌ನಲ್ಲಿ ಪ್ರಯಾಣಿಸುತ್ತಿದ್ದರು. ಇಬ್ಬರೂ ಬಿಹಾರದ ಗೋಪಾಲಗಂಜ್ ಜಿಲ್ಲೆಯ ರಾಜವಾಹಿ ಗ್ರಾಮದ ನಿವಾಸಿಗಳಾಗಿದ್ದರು.
ಕಳೆದ ಮೇ 3 ರಂದು ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ನಂತರ ಈ ಹತ್ಯೆಗಳು ವಲಸೆ ಕಾರ್ಮಿಕರ ಮೇಲೆ ನಡೆದ ಎರಡನೇ ಮಾರಣಾಂತಿಕ ದಾಳಿಯಾಗಿದೆ. ಈ ವರ್ಷದ ಮೇ ತಿಂಗಳಲ್ಲಿ, ಅಪರಿಚಿತ ದುಷ್ಕರ್ಮಿಗಳು ಇಂಫಾಲ್‌ನಲ್ಲಿ ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯ 41 ವರ್ಷದ ವಲಸೆ ಕಾರ್ಮಿಕನನ್ನು ಗುಂಡಿಕ್ಕಿ ಕೊಂದು ಇಬ್ಬರು ಸಹ ಕಾರ್ಮಿಕರನ್ನು ಗಾಯಗೊಳಿಸಿದ್ದರು.
ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಶನಿವಾರ ನಡೆದ ಗುಂಡಿನ ಚಕಮಕಿಯ ನಂತರ ಪೊಲೀಸರು 18 ವರ್ಷದ ಉಗ್ರಗಾಮಿಯನ್ನು ಹೊಡೆದುರುಳಿಸಿದ್ದಾರೆ.
ನಿಷೇಧಿತ ಇಂಫಾಲ್ ಕಣಿವೆ ಮೂಲದ PREPAK ಗುಂಪಿನ ಏಳು ಶಸ್ತ್ರಸಜ್ಜಿತ ಉಗ್ರರು ಪೊಲೀಸ್ ಕಮಾಂಡೋಗಳ ತಂಡದ ಮೇಲೆ ಗುಂಡು ಹಾರಿಸಿದ್ದಾರೆ. ತೌಬಲ್ ಜಿಲ್ಲೆಯಲ್ಲಿ ಶನಿವಾರ ಮಣಿಪುರ ಪೊಲೀಸ್ ಕಮಾಂಡೋಸ್ ಮತ್ತು ಉಗ್ರಗಾಮಿ ಗುಂಪಿನ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಶಸ್ತ್ರಸಜ್ಜಿತ ಉಗ್ರನೊಬ್ಬ ಹತನಾಗಿದ್ದು, ಇತರ ಆರು ಮಂದಿಯನ್ನು ಬಂಧಿಸಲಾಗಿದೆ.