ಬೆಳಗಾವಿ: ಕಲಬುರಗಿ ಕೇಂದ್ರ ಕಾರಾಗ್ರಹದ ಕೈದಿಗಳ ಗಲಾಟೆ ಬಳಿಕ ಇದೀಗ ಬೆಳಗಾವಿಯ ಹಿಂಡಲಗಾ ಜೈಲಿನ ಕೈದಿಗಳ ಗಲಾಟೆ ಪ್ರಕರಣ ಬೆಳಕಿಗೆ ಬಂದಿದೆ. ಹಿಂಡಲಗಾ ಜೈಲಿನಲ್ಲಿ ಕೈದಿಗಳು ಗಂಜಾಗಾಗಿ ಗಲಾಟೆ ಮಡಿದ್ದಲ್ಲದೇ ಜೈಲರ್ ಮೇಲೆಯೇ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಕೈದಿ ಶಾಹಿದ್ ಖುರೇಶಿ ಗಾಂಜಾ ಪ್ಯಾಕೇಟ್ ತೆಗೆದುಕೊಂಡು ಹೋಗುತ್ತಿದ್ದ ವೇಳೆ ಸಹಾಯಕ ಜೈಲರ್ ಜಿ.ಆರ್.ಕಾಂಬಳೆ ಅದನ್ನು ಕಸಿದುಕೊಳ್ಳಲು ಮುಂದಾಗಿದ್ದಾರೆ. ಈ ವೇಳೆ ಕೈದಿ ಶಾಹಿದ್, ಜೈಲರ್ ಕಾಂಬಳೆ ಮೇಲೆ ಹಲ್ಲೆ ನಡೆಸಿದ್ದಾನೆ.
ಜೈಲರ್ ಜಿ.ಆರ್.ಕಾಂಬಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಡಿ.11ರಂದು ನಡೆದಿರುವ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.