ಬೆಂಗಳೂರು: ನಟ ಡಾಲಿ ಧನಂಜಯ್ ಹಾಗೂ ವೈದ್ಯೆ ಧನ್ಯತಾ ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದು, ಫೆಬ್ರವರಿಯಲ್ಲಿ ಹಸೆಮಣೆಯೇರಲಿದ್ದಾರೆ. ಮದುವೆ ಆಮಂತ್ರಣ ಪತ್ರಿಕೆ ಸಿದ್ಧವಾಗಿದ್ದು, ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಆಮಂತ್ರಣ ಪತ್ರಿಕೆ ನೀಡಿ ಆಶಿರ್ವಾದ ಪಡೆದಿದ್ದಾರೆ.
ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಕನ್ನಡ ಚಿತ್ರರಂಗದ ಖ್ಯಾತ ನಟ ಡಾಲಿ ಧನಂಜಯ ಅವರು ತಮ್ಮ ಮದುವೆಯ ಕರೆಯೋಲೆ ನೀಡಿ, ಆಹ್ವಾನಿಸಿದರು. ಹೊಸ ಬದುಕಿಗೆ ಮುಂದಡಿಯಿಡುತ್ತಿರುವ ಜೋಡಿಗೆ ಶುಭ ಹಾರೈಸಿದೆ ಎಂದು ತಿಳಿಸಿದ್ದಾರೆ.
ಇನ್ನು ನಟ ಧನಂಜಯ್, ‘ನನ್ನ ಮದುವೆಯ ಕಾರ್ಡ್’ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಆಮಂತ್ರಣ ಪತ್ರಿಕೆ ಪೋಸ್ಟ್ ಮಾಡಿದ್ದಾರೆ. ತುಂಬಾ ಸರಳ ಹಾಗೂ ಸುಂದರವಾದ ಆಮಂತ್ರಣ ಪತ್ರಿಕೆ ಇದಾಗಿದ್ದು, ಆಮಂತ್ರಣ ಪತ್ರಿಕೆಯಲ್ಲಿಯೂ ಕ್ರಿಯಾಶೀಲತೆ, ಕನ್ನಡತನ ಮೆರೆದಿದ್ದಾರೆ.