ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿದ ಪ್ರವಾಸಿಗರ ಬಸ್ ಪಲ್ಟಿಯಾಗಿ 10ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಜೋಗ ಜಲಪಾತದ ಬಳಿ ನಡೆದಿದೆ.
ಮಂಗಳೂರಿನಿಂದ ಜೋಗ ಜಲಪಾತ ನೋಡಲೆಂದು ಬರುತ್ತಿದ್ದ ಬಸ್, ಮುಪ್ಪಾನೆ ಬಳಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆಯಲ್ಲಿ 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಸ್ಥಳೀಯ ಹಾಗೂ ಸಾಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.