HomeKarnatakaಇಂದಿನಿಂದ ಸುವರ್ಣಸೌಧದಲ್ಲಿ ಅಧಿವೇಶನ ಪುನರಾರಂಭ: ಆಡಳಿತ- ವಿಪಕ್ಷಗಳ ನಡುವೆ ಜಟಾಪಟಿ ಸಾಧ್ಯತೆ

ಇಂದಿನಿಂದ ಸುವರ್ಣಸೌಧದಲ್ಲಿ ಅಧಿವೇಶನ ಪುನರಾರಂಭ: ಆಡಳಿತ- ವಿಪಕ್ಷಗಳ ನಡುವೆ ಜಟಾಪಟಿ ಸಾಧ್ಯತೆ

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ಸೋಮವಾರದಿಂದ ಅಧಿವೇಶನ ಪುನರಾರಂಭವಾಗಲಿದೆ. ಉಭಯ ಸದನಗಳಲ್ಲಿ ನಡೆಯುವ ಕಲಾಪದಲ್ಲಿ ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತ ಚರ್ಚೆ ನಡೆಯಲಿದೆ.

ಈ ನಡುವೆ ವಕ್ಫ್ ಕುರಿತು ಮುಖ್ಯಮಂತ್ರಿಗಳ ಉತ್ತರ, ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳು, ರೈತರ ಸಮಸ್ಯೆಗಳು, ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರು, ಶಿಶುಗಳ ಸರಣಿ ಸಾವು ವಿಚಾರದ ಬಗ್ಗೆ ಚರ್ಚೆ ನಡೆಯಲಿದೆ.

ಪಂಚಮಸಾಲಿಗಳು, ಹಿಂದೂಗಳ ಮೇಲೆ ಲಾಠಿ ಪ್ರಹಾರ ಸೇರಿ ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆಗೆ ಬಿಜೆಪಿ ಒತ್ತಾಯಿಸಿದೆ. ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿಲುಕಿರುವುದರಿಂದ ಸರ್ಕಾರ ವಿಚಲಿತವಾಗಿದೆ. ಹೀಗಾಗಿ ಅಧಿವೇಶನದಲ್ಲಿ ಮುನಿರತ್ನ ಪ್ರಕರಣ, ಕೊರೋನಾ ಹಗರಣ, ಯಡಿಯೂರಪ್ಪ ಪ್ರಕರಣದ ಬಗ್ಗೆ ಪ್ರಸ್ತಾಪಿಸಲು ಮುಂದಾಗಿದೆ ಎಂದು ಬಿಜೆಪಿ ಟೀಕಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎರಡನೇ ವಾರದ ವಿಧಾನ ಮಂಡಲ ಅಧಿವೇಶನದಲ್ಲಿ ವಕ್ಫ್ ಆಸ್ತಿ ವಿಚಾರದಲ್ಲಿ ಇಂದು ಸದನದಲ್ಲಿ ಸರ್ಕಾರ ಉತ್ತರ ನೀಡಲಿದೆ. ಸರ್ಕಾರದ ಪರವಾಗಿ ಸಿಎಂ ಸಿದ್ದರಾಮಯ್ಯ, ಸಚಿವ ಕೃಷ್ಣ ಬೈರೇಗೌಡ ಉತ್ತರ ನೀಡಲಿದ್ದಾರೆ. ಉತ್ತರದ ವೇಳೆ ವಿಜಯೇಂದ್ರ ವಿರುದ್ಧದ ಆರೋಪ ಪ್ರಸ್ತಾಪಿಸುವ ಸಾಧ್ಯತೆ ಇದೆ. ಸಿದ್ದರಾಮಯ್ಯರ ಆರೋಪ ಮಾಡಿದರೆ ಗದ್ದಲ ಉಂಟಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular