alex Certify SHOCKING NEWS: ಮದುವೆ ಮೆರವಣಿಗೆ ವೇಳೆ ದುರಂತ: ಇದ್ದಕ್ಕಿದ್ದಂತೆ ಯುವಕ ಕುಸಿದು ಬಿದ್ದು ಸಾವು! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಮದುವೆ ಮೆರವಣಿಗೆ ವೇಳೆ ದುರಂತ: ಇದ್ದಕ್ಕಿದ್ದಂತೆ ಯುವಕ ಕುಸಿದು ಬಿದ್ದು ಸಾವು!

ಚಿತ್ರದುರ್ಗ: ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಚಿಕ್ಕಮಕ್ಕಳು, ಯುವಕರು ಕೂಡ ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. ಮದುವೆ ಮೆರವಣಿಗೆ ವೇಳೆ ಯುವಕನೊಬ್ಬ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಚಿತ್ರದುರ್ಗದ ಚಳ್ಳಕೆರೆ ತಾಲೂಕಿನ ಪಗಡಲಬಂಡೆ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಮದುವೆ ಕಾರ್ಯಕ್ರಮದ ಮೆರವಣಿಗೆ ವೇಳೆ ಯುವಕ ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

25 ವರ್ಷದ ಆದರ್ಶ್ ಮೃತ ದುರ್ದೈವಿ. ಹೃದಯಾಘಾತದಿಂದ ಸಾವನ್ನಪ್ಪಿರ್ವ ಶಂಕೆ ವ್ಯಕ್ತವಾಗಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...