ಕೈಗಾರಿಕಾ ಬೆಳವಣಿಗೆಗೆ ಪ್ರೋತ್ಸಾಹ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದ್ದು, ಬೆಂಗಳೂರಿನ ಸರ್ಜಾಪುರದಲ್ಲಿ ವಿಶೇಷ ಸೌಲಭ್ಯಗಳನ್ನು ಒಳಗೊಂಡ ‘ಸ್ವಿಫ್ಟ್ ಸಿಟಿ’ ನಿರ್ಮಾಣ ಮಾಡಲಾಗುತ್ತದೆ.
ರಾಜ್ಯದ ಕೈಗಾರಿಕಾ ಬೆಳವಣಿಗೆಗೆ ಉತ್ತೇಜನ ನೀಡಲು ಬೆಂಗಳೂರಿನ ಸರ್ಜಾಪುರದಲ್ಲಿ ‘ಸ್ವಿಫ್ಟ್ ಸಿಟಿ’ ನಿರ್ಮಿಸಲಾಗುತ್ತಿದೆ. ಇಲ್ಲಿ 150 ಮೀಟರ್ ಅಗಲದ ಸಂಪರ್ಕ ರಸ್ತೆ ಒಳಗೊಂಡ ವಿಶ್ವದರ್ಜೆಯ ಸೌಲಭ್ಯಗಳು, ವಸತಿ ವ್ಯವಸ್ಥೆ, ಶಾಲೆಗಳು ಇರುವಂತೆ ಅಭಿವೃದ್ಧಿಪಡಿಸಲಾಗುವುದು ಎಂದು ಕೈಗಾರಿಕೆ ಸಚಿವ ಎಂ. ಬಿ. ಪಾಟೀಲ್ ತಿಳಿಸಿದ್ದಾರೆ.