ಕಾರವಾರ: ಶಾಲೆಯಿಂದ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಟೆಂಪೋದಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ವೆಂಕಟಪುರದ ಬಳಿ ನಡೆದಿದೆ.
ಟೆಂಪೋ ಎಂಜಿನ್ ಬಳಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಎಚ್ಚೆತ್ತ ಚಾಲಕ ರಸ್ತೆ ಬದಿ ಟೆಂಪೋ ನಿಲ್ಲಿಸಿ ವಿದ್ಯಾರ್ಥಿಗಳನ್ನು ಕೆಳಗಿಳಿಸಿದ್ದಾರೆ. ವೆಂಕಟಪುರ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ.
ಭಟ್ಕಳದ ಶಮ್ಸ್ ಶಾಲೆಯ ಮಕ್ಕಳು ತರಗತಿಗಳನ್ನು ಮುಗಿಸಿ ಟೆಂಪೋದಲ್ಲಿ ಬರುತ್ತಿದರು ಈ ವೇಳೆ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ಭಟ್ಕಳ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.