HomeKarnatakaBIG NEWS : ‘ಭ್ರೂಣ ಹತ್ಯೆ’ ಬಗ್ಗೆ ಮಾಹಿತಿ ನೀಡಿದವರಿಗೆ ಇನ್ಮುಂದೆ 1 ಲಕ್ಷ ಬಹುಮಾನ...

BIG NEWS : ‘ಭ್ರೂಣ ಹತ್ಯೆ’ ಬಗ್ಗೆ ಮಾಹಿತಿ ನೀಡಿದವರಿಗೆ ಇನ್ಮುಂದೆ 1 ಲಕ್ಷ ಬಹುಮಾನ ; ರಾಜ್ಯ ಸರ್ಕಾರ ಘೋಷಣೆ.!

ಬೆಂಗಳೂರು : ರಾಜ್ಯದಲ್ಲಿ 2023-24 ರಿಂದ ಇಲ್ಲಿಯವರೆಗೆ ಭ್ರೂಣಹತ್ಯೆ ಸಂಬಂಧಿಸಿದಂತೆ 8 ಪ್ರಕರಣ ದಾಖಲಿಸಿ 46 ಜನರನ್ನು ಬಂಧಿಸಲಾಗಿದೆ. ರಾಜ್ಯದಲ್ಲಿ ಸ್ಕ್ಯಾನಿಂಗ್ ಸೆಂಟರ್ ಮತ್ತು ಆಸ್ಪತ್ರೆಗಳ ಮೇಲೆ ತಪಾಸಣೆಗಳನ್ನು ಜಾಸ್ತಿ ಮಾಡಿರುವುದರಿಂದ ಹೆಚ್ಚಿನ ಸಂಖ್ಯೆಯ ಭ್ರೂಣ ಹತ್ಯೆ ಪ್ರಕರಣಗಳು ಕಂಡುಹಿಡಿಯಲಾಗಿದೆ ಹಾಗೂ ಸರ್ಕಾರಕ್ಕೆ ವರದಿಯಾಗುತ್ತಿದೆ.

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಜಗದೇವ ಗುತ್ತೇದಾರ ಅವರ ಪ್ರಶ್ನೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಉತ್ತರ ನೀಡಿದ್ದಾರೆ.

2018 ರಿಂದ ರಾಜ್ಯದಲ್ಲಿ ‘ಬಾಲಿಕಾ’ ಆನ್ಲೈನ್ ಸಾಫ್ಟ್ ವೇರ್ ಮುಖಾಂತರ ಎಲ್ಲಾ ಸ್ಕ್ಯಾನಿಂಗ್ ಸೆಂಟರ್ ಗಳನ್ನು ಕಡ್ಡಾಯವಾಗಿ ನೋಂದಣಿ ಮತ್ತು ನವೀಕರಣ ನಡೆಸಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯಮಟ್ಟದಲ್ಲಿ ಶೇ.100 ರಷ್ಟು ಗರ್ಭಿಣಿಯರ ನೋಂದಣಿ ಪ್ರಕ್ರಿಯೆಯು ಚಾಲ್ತಿಯಲ್ಲಿದ್ದು, ಗ್ರಾಮ ಮಟ್ಟದಲ್ಲಿ ಜನನ ಸಮಯದ ಲಿಂಗಾನುಪಾತದ ದತ್ತಾಂಶಗಳನ್ನು ಮಾಹಿತಿ ತಂತ್ರಜ್ಞಾನದ ಮುಖಾಂತರ ಮೇಲ್ವಿಚಾರಣೆ ಮಾಡಲು ಅವಕಾಶ ಕಲ್ಪಿಸಲಾಗುತ್ತಿದೆ.ರಾಜ್ಯದಲ್ಲಿ ಇದುವರೆಗೂ ಪಿ.ಸಿ ಮತ್ತು ಪಿ.ಎನ್.ಡಿ.ಟಿ. ಕಾಯ್ದೆಯನ್ನು ಉಲ್ಲಂಘಿಸಿರುವ ಸ್ಕ್ಯಾನಿಂಗ್ ಸೆಂಟರ್/ ಮಾಲೀಕರು/ ವೈದ್ಯರ ವಿರುದ್ಧ ಒಟ್ಟು 136 ಪ್ರಕರಣಗಳನ್ನು ನ್ಯಾಯಾಲಯದಲ್ಲಿ ದಾವೆ ಹೂಡಲಾಗಿದ್ದು, 74 ಪ್ರಕರಣಗಳು ದಂಡ ವಿಧಿಸಿ ಖುಲಾಸೆಗೊಂಡಿದ್ದು, 65 ಪ್ರಕರಣಗಳು ನ್ಯಾಯಾಲಯದಲ್ಲಿ ವಿವಿಧ ಹಂತದಲ್ಲಿ ಬಾಕಿಯಿರುತ್ತದೆ.

ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆ ಮಾಡುವಂತಹ ಸ್ಕ್ಯಾನಿಂಗ್ಸೆಂಟರ್/ಆಸ್ಪತ್ರೆ/ವೈದ್ಯರು/ದಲ್ಲಾಳಿಗಳು/ಗರ್ಭಿಣಿಯರ ಸಂಬಂಧಿಕರ ವಿರುದ್ಧ ಮಾಹಿತಿ ನೀಡಿ, ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲು ಸಹಕರಿಸುವ ಮಾಹಿತಿದಾರರಿಗೆ ಕರ್ನಾಟಕ ಸರ್ಕಾರದಿಂದ ನೀಡುತ್ತಿದ್ದ ಬಹುಮಾನವನ್ನು ₹50 ಸಾವಿರದಿಂದ ₹1ಲಕ್ಷ ದವರೆಗೆ ಹೆಚ್ಚಿಸಲಾಗಿದೆ.

ಪಿ.ಸಿ. ಮತ್ತು ಪಿ.ಎನ್.ಡಿ.ಟಿ. ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಆಯುಕ್ತರ ಅಧ್ಯಕ್ಷತೆಯಲ್ಲಿ ರಾಜ್ಯ ಕಾರ್ಯಪಡೆಯನ್ನು ರಚಿಸಲಾಗಿದ್ದು, ರಾಜ್ಯ ಮಟ್ಟದಿಂದ ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಮಂಡ್ಯ, ಕೋಲಾರ ಜಿಲ್ಲೆಗಳಲ್ಲಿ ಗುಪ್ತ ಕಾರ್ಯಾಚರಣೆ ನಡೆಸಲಾಗುತ್ತಿದೆ.ಹೆಣ್ಣು ಭ್ರೂಣ ಹತ್ಯೆ ಮಾಡದಂತೆ ರಾಜ್ಯಾದ್ಯಂತ ಜನ ಜಾಗೃತಿ ಹಾಗೂ ಅರಿವು ಮೂಡಿಸುವಂತಹ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular