alex Certify BIG NEWS : ಮಂಡ್ಯ ‘ಕನ್ನಡ ಸಾಹಿತ್ಯ ಸಮ್ಮೇಳನ’ಕ್ಕೆ ತೆರಳುವ ‘ಸರ್ಕಾರಿ ನೌಕರ’ರಿಗೆ ‘OOD’ ಬಗ್ಗೆ ಮಹತ್ವದ ಮಾಹಿತಿ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಮಂಡ್ಯ ‘ಕನ್ನಡ ಸಾಹಿತ್ಯ ಸಮ್ಮೇಳನ’ಕ್ಕೆ ತೆರಳುವ ‘ಸರ್ಕಾರಿ ನೌಕರ’ರಿಗೆ ‘OOD’ ಬಗ್ಗೆ ಮಹತ್ವದ ಮಾಹಿತಿ.!

ಮಂಡ್ಯ : ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತೆರಳುವ ‘ಸರ್ಕಾರಿ ನೌಕರ’ರಿಗೆ ಇಲ್ಲಿದೆ ಮುಖ್ಯ ಮಾಹಿತಿ.
ಮಂಡ್ಯ ಜಿಲ್ಲೆಯಲ್ಲಿ 87ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ದಿನಾಂಕ:20-12- 2024 ರಿಂದ 22-12-2024 ರವರೆಗೆ ಜರುಗಲಿದ್ದು, ಬೇರೆ ಜಿಲ್ಲೆಗಳಿಂದ ಆಗಮಿಸುವ ಸರ್ಕಾರಿ ನೌಕರರುಗಳು ಸ್ಥಳದಲ್ಲಿಯೇ ತಂತ್ರಾಂಶದಲ್ಲಿ ನೋಂದಣಿ ಮಾಡಿಕೊಂಡು ಸ್ಥಳದಲ್ಲಿಯೇ ಸಮ್ಮೇಳನಕ್ಕೆ ಆಗಮಿಸಿರುವ ಬಗ್ಗೆ ಮಾನ್ಯ ಜಿಲ್ಲಾಧಿಕಾರಿಗಳ ಸಹಿಯ ಸಹಿತ ಹಾಜರಾತಿಯನ್ನು ಡಿಜಿಟಲ್ ಮೂಲಕ ಅವರ ವಾಟ್ಸ್ ಆಪ್ ಅಥವಾ ಇ-ಮೇಲ್ ಮೂಲಕ ನೀಡಲಾಗುವುದು.

ಸ್ಥಳದಲ್ಲಿ ನೋಂದಾಯಿಸಿಕೊಳ್ಳದ ಸರ್ಕಾರಿ ನೌಕರರಿಗೆ ಮ್ಯಾನ್ಯೂಯಲ್(Manual) ಮೂಲಕ ಹಾಜರಾತಿಯನ್ನು ನೀಡಲು ಅವಕಾಶವಿರುವುದಿಲ್ಲ. ಆದುದರಿಂದ ದಿನಾಂಕ:20-12-2024 ರಿಂದ ದಿನಾಂಕ:22-12-2024 ರಂದು ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುವ FD ನೌಕರರುಗಳು ಸ್ಥಳದಲ್ಲಿಯೇ ತಂತ್ರಾಂಶದಲ್ಲಿ ನೋಂದಾಯಿಸಿಕೊಂಡು ಹಾಜರಾತಿಯನ್ನು ಪಡೆಯಲು ತಿಳಿಸಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...