ಜಾರ್ಜಿಯಾದ ಪರ್ವತ ರೆಸಾರ್ಟ್ ಗುಡೌರಿಯಲ್ಲಿರುವ ಭಾರತೀಯ ರೆಸ್ಟೋರೆಂಟ್ನಲ್ಲಿ ಕಾರ್ಬನ್ ಮಾನಾಕ್ಸೈಡ್ ಅನಿಲದಿಂದ ವಿಷಪ್ರಾಶನದಿಂದಾಗಿ ಹನ್ನೆರಡು ಭಾರತೀಯ ಪ್ರಜೆಗಳು ಸಾವನ್ನಪ್ಪಿದ್ದಾರೆ ಎಂದು ವರದಿಗಳು ತಿಳಿಸಿದೆ.
ಎಲ್ಲರೂ ಎರಡನೇ ಮಹಡಿಯಲ್ಲಿರುವ ತಮ್ಮ ಮಲಗುವ ಕೋಣೆಗಳಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಮೃತರ ಮೃತ ದೇಹಗಳ ಪ್ರಾಥಮಿಕ ಪರಿಶೀಲನೆಯಲ್ಲಿ ಮೃತರಲ್ಲಿ ಯಾವುದೇ ಗಾಯಗಳು ಅಥವಾ ಹಿಂಸಾಚಾರದ ಲಕ್ಷಣಗಳು ಕಂಡುಬಂದಿಲ್ಲ ಎಂದು ಜಾರ್ಜಿಯಾದ ಆಂತರಿಕ ವ್ಯವಹಾರಗಳ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
ಮೃತಪಟ್ಟ ಎಲ್ಲಾ 12 ಮಂದಿ ಭಾರತೀಯ ಪ್ರಜೆಗಳಾಗಿದ್ದು, ಭಾರತೀಯ ರೆಸ್ಟೋರೆಂಟ್ನ ಉದ್ಯೋಗಿಗಳು ಎಂದು ಟಿಬಿಲಿಸಿಯಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಪ್ರಾಣ ಕಳೆದುಕೊಂಡ ಭಾರತೀಯ ಪ್ರಜೆಗಳ ವಿವರಗಳನ್ನು ಪಡೆಯಲು ಮಿಷನ್ ಸ್ಥಳೀಯ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದೆ. ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡಲಾಗುವುದು” ಎಂದು ಭಾರತೀಯ ಮಿಷನ್ ಹೇಳಿಕೆಯಲ್ಲಿ ತಿಳಿಸಿದೆ.