ಬೆಂಗಳೂರು: ತಂದೆಯೇ ತನ್ನ 4 ವರ್ಷದ ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿ ಬಂದಿದೆ. ಪೋಕ್ಸೋ ಕಾಯ್ದೆಯಡಿ ರಾಮಮೂರ್ತಿ ನಗರ ಠಾಣೆ ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
41 ವರ್ಷದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ದಂಪತಿ ನಡುವೆ ಕೌಟುಂಬಿಕ ಕಲಹದ ಕಾರಣ ಬೇರೆ ಬೇರೆ ವಾಸವಾಗಿದ್ದಾರೆ. ಕೋರ್ಟ್ ಆದೇಶದಂತೆ ಮಕ್ಕಳನ್ನು ತಂದೆಯ ಬಳಿ ಬಿಟ್ಟಾಗ ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಹೇಳಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.