alex Certify BIG NEWS : ಅನಗತ್ಯ ‘ಸಿಸೇರಿಯನ್ ಹೆರಿಗೆ’ ತಡೆಗೆ ಸರ್ಕಾರದಿಂದ ಹೊಸ ಯೋಜನೆ ಜಾರಿ : ಸಚಿವ ದಿನೇಶ್ ಗುಂಡೂರಾವ್ ಘೋಷಣೆ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಅನಗತ್ಯ ‘ಸಿಸೇರಿಯನ್ ಹೆರಿಗೆ’ ತಡೆಗೆ ಸರ್ಕಾರದಿಂದ ಹೊಸ ಯೋಜನೆ ಜಾರಿ : ಸಚಿವ ದಿನೇಶ್ ಗುಂಡೂರಾವ್ ಘೋಷಣೆ.!

ಬೆಂಗಳೂರು : ಅನಗತ್ಯ ಸಿಸೇರಿಯನ್ ಹೆರಿಗೆ ತಡೆಗೆ ಸರ್ಕಾರದ ಹೊಸ ಯೋಜನೆ ಜಾರಿಗೆ ತರಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ರಾಜ್ಯದಲ್ಲಿ ಪ್ರತಿ ವರ್ಷ ಸಿಸೇರಿಯನ್ ಹೆರಿಗೆ ಪ್ರಮಾಣ ಹೆಚ್ಚಾಗುತ್ತಿದೆ. 2021-2022 ರಲ್ಲಿ 35% ಇದ್ದ ಸಿಸೇರಿಯನ್ ಪ್ರಮಾಣ, 2022-23 ಕ್ಕೆ 38%ಕ್ಕೆ ಏರಿಕೆಯಾಯಿತು. ಪ್ರಸ್ತುತ ರಾಜ್ಯದಲ್ಲಿ ಸಿಸೇರಿಯನ್ ಹೆರಿಗೆ ಪ್ರಮಾಣ 46% ಇದೆ. ತಾಯಿ ಮತ್ತು ಮಗುವಿನ ಆರೋಗ್ಯದ ದೃಷ್ಟಿಯಿಂದ ಸಿಸೇರಿಯನ್ ಹೆರಿಗೆಗೆ ನಿಯಂತ್ರಣ ಹೇರಬೇಕಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ವಿಶೇಷ ಕಾರ್ಯಕ್ರಮ ರೂಪಿಸಿದ್ದು, ಮುಂದಿನ ತಿಂಗಳು ನೂತನ ಕಾರ್ಯಕ್ರಮವನ್ನು ಘೋಷಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ರಾಜ್ಯದಲ್ಲಿ ಡಿಕಾಯ್ ಆಪರೇಷನ್ಗಳ ಮೂಲಕ ಭ್ರೂಣ ಹತ್ಯೆ ತಡೆಗೆ ಸರ್ಕಾರ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಈ ವರ್ಷ ಬೆಂಗಳೂರು ಗ್ರಾಮಾಂತರ, ಕೋಲಾರ, ಮಂಡ್ಯ, ಬೆಳಗಾವಿಗಳಲ್ಲಿ ಯಶಸ್ವಿ ಡಿಕಾಯ್ ಕಾರ್ಯಾಚರಣೆ ನಡೆಸಲಾಗಿದೆ. ಈವರೆಗೆ ಸುಮಾರು 45 ಮಂದಿಯನ್ನು ಬಂಧಿಸಲಾಗಿದೆ. ಭ್ರೂಣ ಹತ್ಯೆ ಘೋರ ಅಪರಾಧವಾಗಿದ್ದು, ಸರ್ಕಾರ ಇಂತಹ ಕೃತ್ಯಗಳನ್ನು ಗಂಭೀರವಾಗಿ ಪರಿಗಣಿಸಿದೆ ಎಂದಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...