ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್’ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಜಾಮೀನು ನೀಡಿರುವ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಲು ಪೊಲೀಸರು ತೀರ್ಮಾನಿಸಿದ್ದಾರೆ. ಈ ಹಿನ್ನೆಲೆ ಅನುಮತಿಗಾಗಿ ಗೃಹ ಇಲಾಖೆಗೆ ಪೊಲೀಸರು ಪತ್ರ ಬರೆದಿದ್ದು, ಅನುಮತಿ ಸಿಕ್ಕರೆ ಶೀಘ್ರವೇ ದರ್ಶನ್ ಜಾಮೀನು ಪ್ರಶ್ನಿಸಿ ಪೊಲೀಸರು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಲಿದ್ದಾರೆ. ದರ್ಶನ್ ಗೆ ಈಗಲೇ ಜಾಮೀನು ನೀಡಿದರೆ ಪ್ರಕರಣದ ತನಿಖೆ ಮೇಲೆ ಪ್ರಭಾವ ಬೀರಲಿದೆ , ಆದ್ದರಿಂದ ದರ್ಶನ್ ಗೆ ನೀಡಿರುವ ಜಾಮೀನನ್ನು ರದ್ದು ಮಾಡಬೇಕು ಎಂದು ಸುಪ್ರೀಂಕೋರ್ಟ್ ಮೊರೆ ಹೋಗಲು ಪೊಲೀಸರು ಸಿದ್ದತೆ ನಡೆಸಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ಗ್ಯಾಂಗ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಕೊಲೆ ಆರೋಪಿ ನಟ ದರ್ಶನ್ ಸೇರಿದಂತೆ ಎಲ್ಲಾ ಪ್ರಮುಖ ಆರೋಪಿಗಳಿಗೂ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.