ಬೆಳಗಾವಿ: ಆರೋಗ್ಯ ಇಲಾಖೆಯಲ್ಲಿ 32,870 ಹುದ್ದೆಗಳು ಖಾಲಿ ಇದ್ದು, ಇವುಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ವಿಧಾನ ಪರಿಷತ್ ನಲ್ಲಿ ಡಾ. ಎಂ.ಜಿ. ಮುಳೆ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಎನ್.ಹೆಚ್.ಎಂ. ಅಡಿ 13,448, ಎಂಬಿಬಿಎಸ್ ವೈದ್ಯರು 500, ಡಿ ಗ್ರೂಪ್ ನೌಕರರು 4300 ಸೇರಿದಂತೆ ಒಟ್ಟು 18,048 ಹುದ್ದೆಗಳನ್ನು ಹೊರಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
ಗ್ರಾಮೀಣ ಪ್ರದೇಶದಲ್ಲಿ ಆರೋಗ್ಯ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ 1500 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. 120 ತಜ್ಞ ವೈದ್ಯರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಎನ್.ಹೆಚ್.ಎಂ. ಅಡಿಯಲ್ಲಿ ಸೇವೆ ಸಲ್ಲಿಸುತ್ತಿರುವವರಿಗೆ ವೇತನ ಕಡಿಮೆಯಾಗಿದ್ದು, ವೇತನ ಹೆಚ್ಚಳಕ್ಕೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಹೇಳಿದ್ದಾರೆ.