ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಪವಿತ್ರಾಗೌಡ ಬರೋಬ್ಬರಿ 6 ತಿಂಗಳ ಬಳಿಕ ಪರಪ್ಪನ ಅಗ್ರಹಾರ ಜೈಲಿನಿಂದ ಪವಿತ್ರಾ ಗೌಡ ಬಿಡುಗಡೆ ಆಗಿದ್ದಾರೆ.
ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜೈಲು ಸೇರಿದ್ದ ಪವಿತ್ರಾಗೌಡ, ಕೊಲೆ ಪ್ರಕರಣದ ಎ1 ಆರೋಪಿಯಾಗಿದ್ದಾರೆ. ಜೂನ್ 11 ರಂದು ಪವಿತ್ರಾಗೌಡ ಅವರನ್ನು ಬಂಧಿಸಲಾಗಿತ್ತು. ಬರೊಬ್ಬರಿ ಆರು ತಿಂಗಳ ಬಳಿಕ ಪವಿತ್ರಾ ಗೌಡ ಅವರು ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಹಲವರನ್ನು ಬಂಧಿಸಲಾಗಿತ್ತು. ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಪವಿತ್ರಾ ಗೌಡ ಎ-1 ಹಾಗೂ ದರ್ಶನ್ ಎ-2 ಆರೋಪಿಯಾಗಿದ್ದರು. ಸತತವಾಗಿ ಕೋರ್ಟ್ ನಲ್ಲಿ ವಾದ ಮಂಡಿಸಿದ ಪವಿತ್ರಾ ಗೌಡ ಪರ ವಕೀಲರು ಕೊನೆಗೂ ಜಾಮೀನು ಮಂಜೂರು ಮಾಡುವಲ್ಲಿ ಸಫಲವಾಗಿದ್ದಾರೆ. ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳಿಗೂ ಕೋರ್ಟ್ ಜಾಮೀನು ನೀಡಿದೆ. ನಟ ದರ್ಶನ್ ಸದ್ಯ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.