ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಇಂದು ಲೋಕಸಭೆಯಲ್ಲಿ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆ ಮಂಡಿಸಿದೆ.
ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಮಂಗಳವಾರ ಲೋಕಸಭೆಯಲ್ಲಿ ಮಸೂದೆ ಮಂಡಿಸಿದ್ದಾರೆ.
ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆ ಜಾರಿಗೆ ತರಲು ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು. 14ನೇ ಮಾರ್ಚ್ 2024 ರಂದು, ಸಮಿತಿಯು ಸಿದ್ಧಪಡಿಸಿದ 18,000 ಪುಟಗಳ ಸುದೀರ್ಘ ಅಂತಿಮ ವರದಿಯನ್ನು ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಭಾರತದ ಹಾಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿದ್ದರು.
ಕೇಂದ್ರ ಸಚಿವ ಸಂಪುಟವು ಡಿಸೆಂಬರ್ 12 ರಂದು ಮಹತ್ವದ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಗೆ ಅನುಮೋದನೆ ನೀಡಿತ್ತು.ಆಡಳಿತಾರೂಢ ಬಿಜೆಪಿ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕಲ್ಪನೆಯನ್ನು “ಐತಿಹಾಸಿಕ” ಎಂದು ಬಣ್ಣಿಸಿದೆ ಮತ್ತು ಈ ಕ್ರಮವು ವೆಚ್ಚ-ಪರಿಣಾಮಕಾರಿ ಮತ್ತು ಆಡಳಿತ ಸ್ನೇಹಿಯಾಗಿದೆ ಎಂದು ಹೇಳಿಕೊಂಡಿದೆ.
Arjun Ram Meghwal, Union Law Minister introduces Constitutional Amendment Bill in Lok Sabha for ‘One Nation, One Election’. pic.twitter.com/pnbQTOcvwX
— ANI (@ANI) December 17, 2024
‘ಒಂದು ರಾಷ್ಟ್ರ, ಒಂದು ಚುನಾವಣೆ’ ಎಂಬುದು ಭಾರತದಲ್ಲಿ ಹೊಸ ಪರಿಕಲ್ಪನೆಯಲ್ಲ. 1950 ರಲ್ಲಿ ಸಂವಿಧಾನದ ಅಂಗೀಕಾರದ ನಂತರ, 1951 ರಿಂದ 1967 ರ ನಡುವೆ ಪ್ರತಿ ಐದು ವರ್ಷಗಳಿಗೊಮ್ಮೆ ಲೋಕಸಭೆ ಮತ್ತು ಎಲ್ಲಾ ರಾಜ್ಯಗಳ ಅಸೆಂಬ್ಲಿಗಳಿಗೆ ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸಲಾಯಿತು. 1952, 1957, 1962 ಮತ್ತು 1967 ರಲ್ಲಿ ಕೇಂದ್ರ ಮತ್ತು ರಾಜ್ಯಗಳಿಗೆ ಏಕಕಾಲದಲ್ಲಿ ಚುನಾವಣೆಗಳು ನಡೆದವು. ಹೊಸ ರಾಜ್ಯಗಳು ರಚನೆಯಾಗಲು ಪ್ರಾರಂಭಿಸಿದಾಗ ಅದು ಕೊನೆಗೊಂಡಿತು. 1968-1969ರಲ್ಲಿ ವಿವಿಧ ಶಾಸಕಾಂಗ ಸಭೆಗಳ ವಿಸರ್ಜನೆಯ ನಂತರ, ಈ ಪದ್ಧತಿಯನ್ನು ಸಂಪೂರ್ಣವಾಗಿ ಕೈಬಿಡಲಾಯಿತು.