ಬೆಂಗಳೂರು : ಪತ್ನಿ ಕಿರುಕುಳಕ್ಕೆ ಬೇಸತ್ತು ಮನನೊಂದು ಕ್ರಿಕೆಟ್ ಪಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಲದೇವನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹೆಸರಘಟ್ಟ ರಸ್ತೆ ಬಳಿಯ ಸಿಲುವೆಪುರದಲ್ಲಿ ಘಟನೆ ನಡೆದಿದ್ದು, ಬಾಲರಾಜ್ (41) ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಾಲರಾಜ್ ಪತ್ನಿಯ ಕಿರುಕುಳ ಹಾಗೂ ಅಕ್ರಮ ಸಂಬಂಧ ಹೊಂದಿದ್ದ ಆರೋಪ ಕೂಡ ಎದುರಿಸುತ್ತಿದ್ದನು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಡೆತ್ ನೋಟ್ ಬರೆದಿಟ್ಟು ಫ್ಯಾನ್ ಗೆ ನೇಣು ಬಿಗಿದುಕೊಂಡು ಶರಣಾಗಿದ್ದಾನೆ.ಘಟನೆ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ