HomeKarnatakaBIG NEWS : ಬೆಳಗಾವಿ ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ; ಕಾರ್ಯಕ್ರಮದ ಸಿದ್ದತೆ ಪರಿಶೀಲಿಸಿದ DCM...

BIG NEWS : ಬೆಳಗಾವಿ ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ; ಕಾರ್ಯಕ್ರಮದ ಸಿದ್ದತೆ ಪರಿಶೀಲಿಸಿದ DCM ಡಿ.ಕೆ ಶಿವಕುಮಾರ್

ಬೆಂಗಳೂರು : ಮಹಾತ್ಮಾ ಗಾಂಧೀಜಿ ಅವರು ಅಧ್ಯಕ್ಷತೆ ವಹಿಸಿದ್ದ ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ 100 ವರ್ಷಗಳು ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶತಮಾನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ಈ ಹಿನ್ನೆಲೆ ಬೆಳಗಾವಿಯ ಗಾಂಧಿ ಭವನಕ್ಕೆ ಭೇಟಿ ನೀಡಿದ ಡಿಸಿಎಂ ಡಿಕೆ ಶಿವಕುಮಾರ್ ಕಾರ್ಯಕ್ರಮದ ಸಿದ್ಧತೆಗಳನ್ನು ಪರಿಶೀಲಿಸಿದರು.

ಈ ಕುರಿತು ಡಿಸಿಎಂ ಡಿಕೆಶಿ ಟ್ವೀಟ್ ಮಾಡಿದ್ದು, ಮಹಾತ್ಮಾ ಗಾಂಧೀಜಿ ಅವರು ಅಧ್ಯಕ್ಷತೆ ವಹಿಸಿದ್ದ ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ 100 ವರ್ಷಗಳು ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಶತಮಾನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಇಂದು ಕಾಂಗ್ರೆಸ್ ಅಧಿವೇಶನಕ್ಕೆ ಸಾಕ್ಷಿಯಾಗಿದ್ದ ಬೆಳಗಾವಿಯ ಕಾಂಗ್ರೆಸ್ ಬಾವಿಗೆ (ಪಂಪಾ ಸರೋವರ) ಭೇಟಿ ನೀಡಿ ಕಾರ್ಯಕ್ರಮದ ಸಿದ್ಧತೆಗಳನ್ನು ಪರಿಶೀಲಿಸಿದೆ ಎಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular