ಬೆಂಗಳೂರು : ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 24 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿಕೊಂಡಿದ್ದಾರೆ.
ನೈಜೀರಿಯಾ ಮೂಲದ ವಿದೇಶಿ ಮಹಿಳೆ ಕೆ ಆರ್ ಪುರ ಸಿಟಿ ಪಾಳ್ಯದಲ್ಲಿ ದಿನಸಿ ಅಂಗಡಿ ಇಟ್ಟುಕೊಂಡು ಆಹಾರ ಪದಾರ್ಥದ ಜೊತೆ ಡ್ರಗ್ಸ್ ಮಾರಾಟ ಮಾಡುತ್ತಿದ್ದಳು.
ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮಾಲು ಸಮೇತ ಆರೋಪಿಯನ್ನು ಬಂಧಿಸಿದ್ದರು.
ಡ್ರಗ್ಸ್ ಮಾರುತ್ತಿದ್ದ ನೈಜೀರಿಯಾ ಮೂಲದ ರೋಜ್ಲೈಮ್ ನ್ನು ಪೊಲೀಸರು ಬಂಧಿಸಿದ್ದಾರೆ. ವಿದೇಶಿ ಮಹಿಳೆ ಜೂಲಿಯೆಟ್ ಎಂಬಾಕೆ ಮುಂಬೈನಿಂದ ಆಹಾರ ಧಾನ್ಯದ ಜೊತೆ ಡ್ರಗ್ಸ್ ತಂದು ಬೆಂಗಳೂರಿನಲ್ಲಿ ಸರಬರಾಜು ಮಾಡುತ್ತಿದ್ದಳು. ರೋಜ್ಲೈಮ್ 5 ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದು, ವೀಸಾ ಅವಧಿ ಮುಗಿದಿದ್ದರೂ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದಳು. ಈ ಸಂಬಂಧ ಕೆ ಆರ್ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.