ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದಲ್ಲಿ ಟಿ.ಬಿ. ಜಯಚಂದ್ರ ಅವರಿಗೆ 2024ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ ಮಾಡಲಾಗಿದೆ.
ವಿಧಾನಸಭೆಯಲ್ಲಿ ಸ್ಪೀಕರ್ ಯು.ಟಿ. ಖಾದರ್, ಸಿಎಂ ಸಿದ್ದರಾಮಯ್ಯ ಹಾಗೂ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಶಿರಾ ಶಾಸಕ ಮತ್ತು ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿಯಾಗಿರುವ ಟಿ.ಬಿ. ಜಯಚಂದ್ರ ಅವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.