alex Certify ಮಾನವೀಯತೆ ಮೆರೆದ ಶಾಸಕ ಡಾ. ಧನಂಜಯ ಸರ್ಜಿ: ಅಸ್ವಸ್ಥರಾಗಿ ಕುಸಿದುಬಿದ್ದ ಅತಿಥಿ ಉಪನ್ಯಾಸಕಿಗೆ ಚಿಕಿತ್ಸೆ ನೀಡಿ ಆಸ್ಪತ್ರೆಗೆ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾನವೀಯತೆ ಮೆರೆದ ಶಾಸಕ ಡಾ. ಧನಂಜಯ ಸರ್ಜಿ: ಅಸ್ವಸ್ಥರಾಗಿ ಕುಸಿದುಬಿದ್ದ ಅತಿಥಿ ಉಪನ್ಯಾಸಕಿಗೆ ಚಿಕಿತ್ಸೆ ನೀಡಿ ಆಸ್ಪತ್ರೆಗೆ ದಾಖಲು

ಬೆಳಗಾವಿ: ಪ್ರತಿಭಟನಾ ಸ್ಥಳದಲ್ಲಿ ಕುಸಿದು ಬಿದ್ದು ಅತಿಥಿ ಉಪನ್ಯಾಸಕಿ ಅಸ್ವಸ್ಥರಾದ ಘಟನೆ ಬೆಳಗಾವಿಯ ಕೊಂಡಸಕೊಪ್ಪ ಸಮೀಪ ನಡೆದಿದೆ.

ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸುತ್ತಿದ್ದು. ಪ್ರತಿಭಟನಾ ಸ್ಥಳದಲ್ಲಿ ಅತಿಥಿ ಉಪನ್ಯಾಸಕಿ ಅಸ್ವಸ್ಥರಾಗಿದ್ದಾರೆ. ಈ ವೇಳೆ ವಿಧಾನಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಮಾನವೀಯತೆ ಮೆರೆದಿದ್ದಾರೆ.

ಅಸ್ವಸ್ಥರಾಗಿದ್ದ ಉಪನ್ಯಾಸಕಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ತಮ್ಮ ಕಾರ್ ನಲ್ಲಿಯೇ ಕರೆದೊಯ್ದು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಡಾ.ಧನಂಜಯ ಸರ್ಜಿ ಅವರು ಮನವಿಯನ್ನು ಸ್ವೀಕರಿಸಿ, ಅತಿಥಿ ಉಪನ್ಯಾಸಕರ ಗೌರವ ಧನವನ್ನು ಹೆಚ್ಚಳ ಮಾಡುವಂತೆ ಈಗಾಗಲೇ ಅಧಿವೇಶನದಲ್ಲಿ ಚರ್ಚೆ ಮಾಡಲಾಗಿದ್ದು, ಈ ಸಂಬಂದ ಸಚಿವರ ಜೊತೆ ಸಭೆ ಕೂಡ ನಡೆಸಲಾಗಿದೆ. ಸಚಿವರು ಪ್ರಮುಖ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಧರಣಿ ನಿರತರನ್ನು ಕುರಿತು ಮಾತನಾಡುವ ಸಂದರ್ಭದಲ್ಲಿ ಅತಿಥಿ ಉಪನ್ಯಾಸಕಿಯೊಬ್ಬರು ದಿಢೀರನೇ ಅಸ್ವಸ್ಥಗೊಂಡು ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ತಕ್ಷಣ ಕಾರ್ಯ ಪ್ರವೃತ್ತರಾದ ಡಾ.ಧನಂಜಯ ಸರ್ಜಿ ಅವರು ಸ್ಥಳದ್ಲಲೇ ಪ್ರಥಮ ಚಿಕಿತ್ಸೆ ನೀಡಿ, ಖುದ್ದು ತಾವೇ ಆಸ್ಪತ್ರೆಗೆ ಕರೆದೊಯ್ಯುವ ಮೂಲಕ ಕರ್ತವ್ಯ ಪ್ರಜ್ಞೆ ಮರೆದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...