ಬೆಳಗಾವಿ: ರಾಜ್ಯ ಮಟ್ಟ, ಜಿಲ್ಲಾ ಮಟ್ಟದ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಗಳಲ್ಲಿ ಖಾಲಿ ಇರುವ ಮತ್ತು ಮುಂದಿನ ಆರು ತಿಂಗಳಲ್ಲಿ ಖಾಲಿಯಾಗುವ ಅಧ್ಯಕ್ಷರು, ಸದಸ್ಯರ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.
ಜೆಡಿಎಸ್ ಸದಸ್ಯ ಗೋವಿಂದರಾಜು ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಸಚಿವರು, ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಗಳಲ್ಲಿನ ಹುದ್ದೆಗಳ ಭರ್ತಿಗೆ ಸಮಿತಿ ರಚಿಸಲಾಗಿದೆ. ಕಾಯ್ದೆ ಮತ್ತು ನಿಯಮಾವಳಿಯ ಅನ್ವಯ ಬಾಕಿ ಇರುವ ಅಧ್ಯಕ್ಷರು, ಸದಸ್ಯರ ಹುದ್ದೆಗಳಿಗೆ ಪರ್ಯಾಯ ವ್ಯವಸ್ಥೆ ಮಾಡಿರುವ ಕಾರಣ ದೂರುಗಳ ವಿಲೇವಾರಿಯಲ್ಲಿ ವಿಳಂಬವಾಗಿಲ್ಲ ಎಂದು ಹೇಳಿದ್ದಾರೆ.