ಬೆಂಗಳೂರು: ಮದುವೆ ಆಹ್ವಾನ ಪತ್ರಿಕೆಯಲ್ಲಿ ಪ್ರಧಾನಿ ಮೋದಿ ಪರವಾಗಿ ಮತ ಕೇಳಿದ್ದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದು ಮಾಡಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ನಿವಾಸಿ ಶಿವಪ್ರಸಾದ್ ವಿರುದ್ಧ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣವನ್ನು ಹೈಕೋರ್ಟ್ ರದ್ದು ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಚುನಾವಣಾ ಸಂಚಾರಿ ವಿಚಕ್ಷಣ ಅಧಿಕಾರಿಗಳು ದಾಖಲಿಸಿದ ಪ್ರಕರಣ ರದ್ದು ಮಾಡಬೇಕೆಂದು ಕೋರಿ ಶಿವಪ್ರಸಾದ್, ಆಮಂತ್ರಣ ಪತ್ರಿಕೆ ಮುದ್ರಕ ಬಾಲಕೃಷ್ಣ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠದಿಂದ ಈ ಆದೇಶ ನೀಡಲಾಗಿದೆ.
ಅರ್ಜಿದಾರ ಶಿವಪ್ರಸಾದ್ ಅವರ ಮದುವೆ ಕಳೆದ ಮಾರ್ಚ್ ನಲ್ಲಿ ನಡೆದಿತ್ತು. ಮಾರ್ಚ್ 1ರಂದು ಮುದ್ರಿಸಿದ ಮದುವೆ ಆಮಂತ್ರಣ ಪತ್ರಿಕೆಯಲ್ಲಿ ನೀವು ನನಗೆ ನೀಡುವ ಉಡುಗೊರೆ ನರೇಂದ್ರ ಮೋದಿಗೆ ಮತ ಹಾಕುವುದಾಗಿದೆ ಎಂದು ಮುದ್ರಿಸಿದ್ದರು. ಚುನಾವಣಾ ನೀತಿ ಸಂಹಿತೆ ಜಾರಿಗೆ ಮೊದಲು ನಡೆದ ಘಟನೆ ಆಧರಿಸಿ ಪ್ರಕರಣ ದಾಖಲಿಸಿರುವುದು ಅಕ್ರಮವಾಗಿದೆ ಎಂದು ವಾದಿಸಿದ್ದರು.