ನವದೆಹಲಿ : ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರ ಆರೋಗ್ಯದ ಬಗ್ಗೆ ಅಪೋಲೋ ಆಸ್ಪತ್ರೆ ಮಹತ್ವದ ಮಾಹಿತಿ ನೀಡಿದೆ.
ಅಡ್ವಾಣಿ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡುಬರುತ್ತಿದೆ ಎಂದು ಅಪೋಲೋ ಆಸ್ಪತ್ರೆಯ ಹೇಳಿಕೆ ತಿಳಿಸಿದೆ. ಅವರು ಒಂದು ಅಥವಾ ಎರಡು ದಿನಗಳಲ್ಲಿ ತೀವ್ರ ನಿಗಾ ಘಟಕದಿಂದ ವಾರ್ಡ್ ಗೆ ಶಿಫ್ಟ್ ಆಗಲಿದ್ದಾರೆ ಎಂದು ಹೇಳಿದ್ದಾರೆ.
ಬಿಜೆಪಿ ಹಿರಿಯ ನಾಯಕ ಮತ್ತು ಭಾರತದ ಮಾಜಿ ಉಪ ಪ್ರಧಾನಿ ಎಲ್.ಕೆ.ಅಡ್ವಾಣಿ ಅವರು ಡಿಸೆಂಬರ್ 12 ರಿಂದ ಇಂದ್ರಪ್ರಸ್ಥ ಅಪೋಲೋ ಆಸ್ಪತ್ರೆಯ ಐಸಿಯುನಲ್ಲಿ ಡಾ.ವಿನೀತ್ ಸೂರಿ ಅವರ ಆರೈಕೆಯಲ್ಲಿದ್ದಾರೆ. ಅವರ ವೈದ್ಯಕೀಯ ಸ್ಥಿತಿಯಲ್ಲಿ ಕ್ರಮೇಣ ಸುಧಾರಣೆ ಕಂಡುಬಂದಿದೆ. ಅವರ ಪ್ರಗತಿಯ ಆಧಾರದ ಮೇಲೆ, ಮುಂದಿನ 1-2 ದಿನಗಳಲ್ಲಿ ಅವರನ್ನು ಐಸಿಯುನಿಂದ ಸ್ಥಳಾಂತರಿಸುವ ಸಾಧ್ಯತೆಯಿದೆ” ಎಂದು ಇಂದ್ರಪ್ರಸ್ಥ ಅಪೊಲೊ ಆಸ್ಪತ್ರೆ ತಿಳಿಸಿದೆ. ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಅವರನ್ನು ಡಿಸೆಂಬರ್ 13 ರ ತಡರಾತ್ರಿ ಇಂದ್ರಪ್ರಸ್ಥ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು.