ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಚಳೀ ಜೋರಾಗಿದೆ. ಮೈ ಕೊರೆಯುವ ಚಳಿ ಜನರನ್ನು ನಡುಗಿಸುತ್ತಿದೆ. ಭಾರಿ ಚಳಿ ಹಿನ್ನೆಲೆ ಜನರು ಸ್ವೆಟರ್, ಟೊಪ್ಪಿಗಳ ಮೊರೆ ಹೋಗುತ್ತಿದ್ದಾರೆ.
ಚಳಿ ನಡುವೆ ರಾಜ್ಯದಲ್ಲಿ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಡಿಸೆಂಬರ್ 20 ರಿಂದ ರಾಜ್ಯದ ಹಲವು ಕಡೆ ಮಳೆಯಾಗುವ ಸಾಧ್ಯತೆ ಇದ್ದು, ಒಂದು ವೇಳೆ ಮತ್ತೆ ಮಳೆಯಾದರೆ ಚಳಿ ಪ್ರಮಾಣ ಕಡಿಮೆಯಾಗಲಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ವಿಜಯಪುರ, ರಾಯಚೂರು, ಕಲಬುರಗಿ, ಬೀದರ್, ಬಾಗಲಕೋಟೆ, ಚಾಮರಾಜನಗರ, ಹಾಸನ, ಕೊಡಗು. ಕೋಲಾರ, ರಾಮನಗರದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲವು ಕಡೆ ಮೋಡ ಕವಿದ ವಾತಾವರಣ ಕೂಡ ಇರಲಿದೆ.