ಬೆಂಗಳೂರು : ಬೆನ್ನುನೋವಿನಿಂದ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದ ನಟ ದರ್ಶನ್ ಆಸ್ಪತ್ರೆಯಿಂದ ನಟ ದರ್ಶನ್ ಡಿಸ್ಚಾರ್ಜ್ ಆಗಿದ್ದಾರೆ ಎಂದು ತಿಳಿದು ಬಂದಿದೆ.
ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಕಾರು ಹತ್ತಿ ತಮ್ಮ ನಿವಾಸಕ್ಕೆ ಮರಳಿದ್ದಾರೆ. ಮೂಲಗಳ ಪ್ರಕಾರ ನಟ ದರ್ಶನ್ ಅವರಿಗೆ ಯಾವುದೇ ಶಸ್ತ್ರಚಿಕಿತ್ಸೆ ಮಾಡಿಲ್ಲ. ಕೇವಲ ಫಿಜಿಯೋಥೆರಪಿ ಮೂಲಕ ಮಾತ್ರ ಅವರಿಗೆ ಚಿಕಿತ್ಸೆ ನೀಡಲಾಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ದರ್ಶನ್ ಅವರಿಗೆ ಜಾಮೀನು ದೊರೆತಿದೆ. ಕಳೆದ ಒಂದೂವರೆ ತಿಂಗಳಿಂದ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ದರ್ಶನ್ ಇಂದು ಒಂದೂವರೆ ತಿಂಗಳಿನ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಮಧ್ಯಂತರ ಜಾಮೀನು ಪಡೆದು ಚಿಕಿತ್ಸೆ ಪಡೆದುಕೊಂಡಿದ್ದ ದರ್ಶನ್ ಫಿಜಿಯೋಥೆರಪಿ ಮಾಡಿಸಿದ್ದು, ಸದ್ಯ ವಿಶ್ರಾಂತಿ ಪಡೆಯಲು ವೈದ್ಯರು ದರ್ಶನ್ ಗೆ ಸಲಹೆ ನೀಡಿದ್ದಾರೆ. ಹೀಗಾಗಿ ವೈದ್ಯರ ಸಲಹೆ ಮೇರೆಗೆ ನಟ ದರ್ಶನ್ ಡಿಸ್ಚಾರ್ಜ್ ಆಗಿ ಮನೆ ಕಡೆ ಹೊರಟಿದ್ದಾರೆ.