ಬೆಂಗಳೂರು : ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಿಂದ ನಟ ದರ್ಶನ್ ಡಿಸ್ಚಾರ್ಜ್ ಆಗಿದ್ದು, ಪತ್ನಿ ವಿಜಯಲಕ್ಷ್ಮಿ ನಿವಾಸಕ್ಕೆ ತೆರಳಿದ್ದಾರೆ.
ಆಸ್ಪತ್ರೆಯಿಂದ ಕಾರಿನಲ್ಲಿ ತನ್ನ ಪತ್ನಿ ವಿಜಯಲಕ್ಷ್ಮಿ ಹಾಗೂ ಪುತ್ರನ ಜೊತೆ ಹೊಸಕೆರೆಹಳ್ಳಿಯಲ್ಲಿರುವ ವಿಜಯಲಕ್ಷ್ಮಿ ಫ್ಲ್ಯಾಟ್ ಗೆ ದರ್ಶನ್ ತೆರಳಿದ್ದಾರೆ.
ಕಳೆದ ಒಂದೂವರೆ ತಿಂಗಳಿಂದ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ದರ್ಶನ್ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿ ಆದೇಶ ಹೊರಡಿಸಿದೆ.