ಬೆಳಗಾವಿ : ‘ಗೃಹಲಕ್ಷ್ಮಿ’ ಫಲಾನುಭವಿಗಳ ಜೊತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಇಂದು ವಿಧಾನಸಭೆ ಕಲಾಪಕ್ಕೆ ಆಗಮಿಸಿದ್ದಾರೆ.
ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆ ಕಲಾಪಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೆಲವು ಗೃಹಲಕ್ಷ್ಮಿ’ ಫಲಾನುಭವಿಗಳನ್ನು ಕರೆತಂದು ಕಲಾಪ ವೀಕ್ಷಣೆಗೆ ಅನುವು ಮಾಡಿಕೊಟ್ಟರು.
ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಹಣ ಕೂಡಿಟ್ಟು, ಸಮರ್ಪಕವಾಗಿ ಬಳಕೆ ಮಾಡಿಕೊಂಡಿರುವ ಕೆಲವು ಗೃಹಲಕ್ಷ್ಮಿಯರನ್ನು ಬೆಳಗಾವಿಯ ಸುವರ್ಣ ವಿಧಾನಸೌಧದ ದರ್ಶನಕ್ಕೆ ಆಹ್ವಾನಿಸಿದ ಹಿನ್ನೆಲೆಯಲ್ಲಿ ಇಂದು ಬೆಳಗಾವಿಯ ಗೃಹ ಕಚೇರಿಯಿಂದ ಸುವರ್ಣ ವಿಧಾನಸೌಧಕ್ಕೆ ಪ್ರಯಾಣ ಬೆಳೆಸಿದೆ. ಗೃಹಲಕ್ಷ್ಮೀ ಯೋಜನೆಯ ಕೆಲವು ಫಲಾನುಭವಿಗಳನ್ನು ಇಂದು ಬೆಳಗಾವಿಯ ಸುವರ್ಣ ವಿಧಾನಸೌಧದ ದರ್ಶನಕ್ಕೆ ಆಹ್ವಾನಿಸಿದ ಹಿನ್ನೆಲೆಯಲ್ಲಿ ಸುವರ್ಣ ವಿಧಾನ ಸೌಧದ ದರ್ಶನ ಹಾಗೂ ಆಡಳಿತ ಯಂತ್ರದ ವೀಕ್ಷಣೆಗೆ ಅನುವು ಮಾಡಿಕೊಡಲಾಯಿತು ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ್ದಾರೆ.
ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಹಣ ಕೂಡಿಟ್ಟು, ಸಮರ್ಪಕವಾಗಿ ಬಳಕೆ ಮಾಡಿಕೊಂಡಿರುವ ಕೆಲವು ಗೃಹಲಕ್ಷ್ಮಿಯರನ್ನು ಬೆಳಗಾವಿಯ ಸುವರ್ಣ ವಿಧಾನಸೌಧದ ದರ್ಶನಕ್ಕೆ ಆಹ್ವಾನಿಸಿದ ಹಿನ್ನೆಲೆಯಲ್ಲಿ ಇಂದು ಬೆಳಗಾವಿಯ ಗೃಹ ಕಚೇರಿಯಿಂದ ಸುವರ್ಣ ವಿಧಾನಸೌಧಕ್ಕೆ ಪ್ರಯಾಣ ಬೆಳೆಸಿದೆ.#Belagavi pic.twitter.com/006FL7lhr3
— Laxmi Hebbalkar (@laxmi_hebbalkar) December 18, 2024