alex Certify BIG NEWS : ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : ‘KIADB’ ಕೈಗಾರಿಕೆಗಳಲ್ಲಿ ರೈತರಿಗೂ ಸಹಭಾಗಿತ್ವ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : ‘KIADB’ ಕೈಗಾರಿಕೆಗಳಲ್ಲಿ ರೈತರಿಗೂ ಸಹಭಾಗಿತ್ವ.!

ಬೆಳಗಾವಿ : ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ಸ್ವಾಧೀನಪಡಿಸಿಕೊಳ್ಳುವ ಜಮೀನಿನಲ್ಲಿ ಸ್ಥಾಪಿತವಾಗುವ ಕೈಗಾರಿಕೆಗಳಲ್ಲಿ ರೈತರಿಗೂ ಸಹಭಾಗಿತ್ವ ನೀಡಲು ಅಥವಾ ಅವರೇ ಕೈಗಾರಿಕೆ ಸ್ಥಾಪಿಸಲು ಮುಂದಾದರೆ ನೆರವು ನೀಡುವ ಕುರಿತು ಪರಿಶೀಲಿಸುತ್ತೇವೆ ಎಂದು ಕೈಗಾರಿಕೆ ಸಚಿವರಾದ  ಎಂಬಿ ಪಾಟೀಲ್ ಹೇಳಿದರು.

ಪ್ರಸ್ತುತ ಇರುವ ಕಾಯ್ದೆಯ ಪ್ರಕಾರ ಕೆಐಎಡಿಬಿ ವಶಪಡಿಸಿಕೊಳ್ಳುವ ಭೂಮಿಗೆ ಮಾರುಕಟ್ಟೆ ದರದಲ್ಲಿ ಪರಿಹಾರ ನೀಡಲಾಗುತ್ತಿದೆ. ಅವರು ಬಯಸಿದರೆ ಅಭಿವೃದ್ಧಿಗೊಳಿಸಿದ ಅವರ ಪ್ರದೇಶದಲ್ಲಿ ಪ್ರತಿ ಎಕರೆಗೆ ಪರ್ಯಾಯವಾಗಿ 10,781 ಚದರ ಅಡಿ ಜಾಗ ನೀಡಲಾಗುತ್ತಿದೆ. ನಗರಾಭಿವೃದ್ದಿ ಪ್ರಾಧಿಕಾರಗಳು ರೈತರಿಂದ ಸ್ವಾಧೀನಪಡಿಸಿಕೊಂಡ ಜಮೀನಿನ ಬದಲಿಗೆ ಅಭಿವೃದ್ಧಿಪಡಿಸಲಾದ ನಿವೇಶನಗಳನ್ನು ನೀಡುವ ಮಾದರಿಯಲ್ಲಿ ಕೈಗಾರಿಕಾ ಪ್ರದೇಶದಲ್ಲೂ ರೈತರನ್ನೂ ಒಳಗೊಳ್ಳುವಂತೆ ಮಾಡಲು ಸೂಕ್ತ ನಿಯಮ ರೂಪಿಸಬೇಕಿದೆ. – ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಕೈಗಾರಿಕೆ ಸಚಿವರಾದ
ಎಂಬಿ ಪಾಟೀಲ್ ಉತ್ತರ ನೀಡಿದರು.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...