ಚಿಕ್ಕಬಳ್ಳಾಪುರ : ಚಲಿಸುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಬೆಂಕಿ ಕಾಣಸಿಕೊಂಡಿದ್ದು, ಭಾರಿ ಅನಾಹುತವೊಂದು ತಪ್ಪಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿಯಲ್ಲಿ ಘಟನೆ ನಡೆದಿದೆ. ಬಸ್ ಗೌರಿಬಿದನೂರಿನಿಂದ ಚಿಕ್ಕಬಳ್ಳಾಪುರಕ್ಕೆ ತೆರಳುತ್ತಿದ್ದ ವೇಳೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.
ಬಸ್ ನಲ್ಲಿ 40 ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದು, ಎಲ್ಲರೂ ಸೇಫ್ ಆಗಿದ್ದಾರೆ. ಬಳಿಕ ಪ್ರಯಾಣಿಕರಿಗೆ ಬೇರೆ ಬಸ್ ವ್ಯವಸ್ಥೆ ಮಾಡಿ ಕಳುಹಿಸಿಕೊಡಲಾಯಿತು. ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.