ಮಂಗಳೂರು: ಸಾಲ ಮರುಪಾವತಿ ಮಾಡುವಂತೆ ಬ್ಯಾಂಕ್ ಅಧ್ಯಕ್ಷ ನೀಡುತ್ತಿದ್ದ ಕಿರುಕುಳಕ್ಕೆ ಬೇಸತ್ತ ವ್ಯಕ್ತಿಯೊಬ್ಬರು ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳೂರಿನ ಹೊರವಲಯದ ಫೆರ್ಮಾಯಿಯಲ್ಲಿ ನಡೆದಿದೆ.
ಮನೋಹರ್ ಆತ್ಮಹತ್ಯೆಗೆ ಶರಣದಾವರು. ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ವಿರುದ್ಧ ಆರೋಪ ಮಾಡಿ, ವಿಡಿಯೋ ರೆಕಾರ್ಡ್ ಮಾಡಿಟ್ಟು ಮನೋಹರ್ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸಾಲ ಮರುಪಾವತಿ ಮಾಡುವಂತೆ ಬ್ಯಾಂಕ್ ಅಧ್ಯಕ್ಷ ಅನಿಲ್ ಕಿರುಕುಳ ನೀಡುತ್ತಿದ್ದರಂತೆ. ಮನೋಹರ್ ಅವರ ಮನೆ ಜಪ್ತಿ ಮಾಡಲು ಸೂಚಿಸಿದ್ದರಂತೆ. ಇದೇ ಕಾರಣಕ್ಕೆ ಮನನೊಂದ ಮನೋಹರ್, ತನ್ನ ಸಾವಿಗೆ ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಕಾರಣ ಎಂದು ವಿಡಿಯೋ ಮಡಿ ವಾಟ್ಸಪ್ ಸಂದೇಶ ರವಾನಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುಇವ ಪೊಲೀಸರು ತನಿಖೆ ನಡೆಸಿದ್ದಾರೆ.